ಆದಿಶಕ್ತಿ ತೋಪಮ್ಮನವರ ದೇವಾಲಯ.  
ಜಿಲ್ಲೆ

4 ರಂದು ಆದಿಶಕ್ತಿ ತೋಪಮ್ಮ ಜಾತ್ರೋತ್ಸವ

ಕೆ.ಆರ್.ನಗರ: ಪಟ್ಟಣದ ಹೊರ ವಲಯದ ಹಾಸನ-ಮೈಸೂರು ರಸ್ತೆಯಲ್ಲಿರುವ ಆದಿಶಕ್ತಿ ತೋಪಮ್ಮ ದೇಗುಲದಲ್ಲಿ ವಾರ್ಷಿಕ ಜಾತ್ರೆ ಮಾ.4 ರಂದು ನಡೆಯಲಿದೆ.

ಅಂದು ಬೆಳಗ್ಗೆ ಗಾವಡಗೆರೆ ಗುರುಲಿಂಗ ಜಂಗಮ ಮಠದ ಶ್ರೀ ನಟರಾಜ ಸ್ವಾಮೀಜಿ, ಕಾಗಿನೆಲೆ ಕನಕಗುರುಪೀಠದ ಶ್ರೀ ಶಿವಾನಂದಪುರಿ ಸ್ವಾಮೀಜಿ, ಅರಕೆರೆ ವಿರಕ್ತ ಮಠದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಸಾನ್ನಿಧ್ಯದಲ್ಲಿ ನಡೆಯುವ ಜಾತ್ರೆಗೆ ವಿಶೇಷ ಆಹ್ವಾನಿತರಾಗಿ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಪಾಲ್ಗೊಳ್ಳುವರು. ಶಾಸಕ ಡಿ.ರವಿಶಂಕರ್ ಅಧ್ಯಕ್ಷತೆ ವಹಿಸಲಿದ್ದು, ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್, ಮಾಜಿ ಸಚಿವ ಸಾ.ರಾ.ಮಹೇಶ್, ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯ ದೊಡ್ಡಸ್ವಾಮೇಗೌಡ, ಪುರಸಭೆ ಅಧ್ಯಕ್ಷ ಶಿವುನಾಯಕ್, ಉಪಾಧ್ಯಕ್ಷೆ ವಸಂತಮ್ಮ, ಆದಿಶಕ್ತಿ ತೋಪಮ್ಮ ಸೇವಾ ಟ್ರಸ್ಟ್ ಅಧ್ಯಕ್ಷ ಸಿ.ಎ.ರಾಜು, ಗೌರವಾಧ್ಯಕ್ಷ ಅಣ್ಣಯ್ಯನಾಯಕ, ನವ ನಗರ ಅರ್ಬನ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ಬಸಂತ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷೆ ಪುಷ್ಪಲತಾ ಸಿ.ಪಿ.ರಮೇಶ್, ಡೋರ‌್ನಹಳ್ಳಿ ಗ್ರಾ.ಪಂ. ಅಧ್ಯಕ್ಷೆ ರಾಜೇಶ್ವರಿ ಬಲರಾಮ್ ಹಾಗೂ ಮುಖಂಡರು ಭಾಗವಹಿಸಲಿದ್ದಾರೆ.

ಸಕಲ ಸಿದ್ಧತೆ: ಈ ಬಾರಿ ಅತ್ಯಂತ ವೈಭವದಿಂದ ಆದಿಶಕ್ತಿ ತೋಪಮ್ಮ ಜಾತ್ರೆ ಆಚರಿಸಲು ದೇವಾಲಯದ ಸೇವಾ ಟ್ರಸ್ಟ್ ಪದಾಧಿಕಾರಿಗಳು ಸಿದ್ಧತೆ ಕೈಗೊಂಡಿದ್ದು ಹಾಸನ-ಮೈಸೂರು ರಸ್ತೆ ಸೇರಿದಂತೆ ದೇವಾಲಯದ ಸುತ್ತ ವಿದ್ಯುತ್ ದೀಪ ಮತ್ತು ಫ್ಲೆಕ್ಸ್‌ಗಳನ್ನು ಅಳವಡಿಸಿದ್ದಾರೆ. ಮುಂಜಾನೆ 5 ಗಂಟೆಗೆ ದೇವಾಲಯದಲ್ಲಿ ವಿಶೇಷ ಪೂಜೆ, ಹೋಮ ಮತ್ತು ಹವನಗಳು ನಡೆಯಲಿದೆ ಎಂದು ಸೇವಾಟ್ರಸ್ಟ್ ಕಾರ್ಯದರ್ಶಿ ಕೆ.ಪಿ.ಜಗದೀಶ್ ಪ್ರಕಟಣೆಯಲ್ಲಿ ಕೋರಿದ್ದಾರೆ.