ಬೆಳ್ತಂಗಡಿ: ಕರ್ನಾಟಕ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ನೃತ್ಯ ಪರಿಕರಗಳ ವಿಶ್ವವಿದ್ಯಾಲಯ ಮೈಸೂರು ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಅದಿತಿ ಮುಗೆರೋಡಿ ಉತ್ತಮ ಶ್ರೇಯಾಂಕದೊಂದಿಗೆ ತೇರ್ಗಡೆಯಾಗಿದ್ದಾರೆ.
ಅದಿತಿ ಪುತ್ತೂರು ಶ್ರೀ ಶಾರದಾ ಕಲಾ ಕೇಂದ್ರ ಟ್ರಸ್ಟ್‌ನ ನಿರ್ದೇಶಕ ವಿದ್ವಾನ್ ಸುದರ್ಶನ್ ಎಂ.ಎಲ್.ಭಟ್ ಅವರ ಶಿಷ್ಯೆ. ವಿದುಷಿ ಡಿಂಪಲ್ ಶಿವರಾಜ್ ಅವರಿಂದ ಶ್ರೀ ಶಾರದಾ ಕಲಾ ಶಾಲೆ ಪದ್ಮುಂಜ ಶಾಖೆಯಲ್ಲಿ ನೃತ್ಯಾಭ್ಯಾಸ ಮಾಡುತ್ತಿದ್ದಾರೆ. ಇವರು ಪದ್ಮುಂಜ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿ ವಿದ್ಯಾರ್ಥಿನಿ. ಅದಿತಿ ಮಂಜುಳಾ ಮತ್ತು ಪುರುಷೋತ್ತಮ ಮುಗೆರೋಡಿ ದಂಪತಿಯ ಪುತ್ರಿ.