ಜಿಲ್ಲೆ

ಅಂಬೇಡ್ಕರ್​ರ ಆದರ್ಶ ಅಳವಡಿಸಿಕೊಳ್ಳಿ

Haveri - Desk - Ganapati Bhat

ಶಿಗ್ಗಾಂವಿ: ಸಮಾನತೆ ಸ್ವಾತಂತ್ರ್ಯೆಂಬ ಕೊಡೆ ಜೀವನದುದ್ದಕ್ಕೂ ಉಳಿಯುತ್ತದೆ. ಆ ಕೊಡೆಯೇ ಭಾರತ ಸಂವಿಧಾನವಾಗಿದೆ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಟಿ.ಎಂ. ಭಾಸ್ಕರ ಹೇಳಿದರು.

ತಾಲೂಕಿನ ಗೊಟಗೋಡಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ಆಯೋಜಿಸಿದ್ದ ಡಾ.ಬಿ ಆರ್. ಅಂಬೇಡ್ಕರ್ ಅವರ 68ನೇ ಮಹಾ ಪರಿನಿರ್ವಾಣ ದಿನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಮಾನತೆ, ಬ್ರಾತೃತ್ವ, ಶಿಕ್ಷಣ, ಸಂಘಟನೆ, ಹೋರಾಟ ಎಂಬ ತತ್ವವನ್ನು ಜೀವನದಲ್ಲಿ ಅಳವಡಿಸಿಕೊಂಡು ಹೋಗುವ ಜನ ಭಾರತ ಸಂವಿಧಾನ ರಥವನ್ನು ಎಳೆದುಕೊಂಡು ಹೋಗುತ್ತಾರೆ. ಇದು ಪ್ರಜಾಪ್ರಭುತ್ವದಲ್ಲಿ ಗಟ್ಟಿಯಾಗಿ ನಿಂತುಕೊಂಡಿದೆ ಎಂದರು.

ಮೌಲ್ಯಮಾಪನ ಕುಲಸಚಿವ ಪ್ರೊ.ಎನ್.ಎಂ. ಸಾಲಿ ಮಾತನಾಡಿ, ಡಾ.ಬಿ.ಆರ್. ಅಂಬೇಡ್ಕರ್ ಅವರು ಹೇಳಿದಂತೆ ಸ್ವಾಭಿಮಾನದ ಬದುಕು ರೂಢಿಸಿಕೊಂಡಾಗ ಮಾತ್ರ ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಅರ್ಥ ಮಾಡಿಕೊಂಡಂತಾಗುತ್ತದೆ. ಅವರ ವಿಚಾರಧಾರೆಗಳನ್ನು ಅಧ್ಯಯನ ಮಾಡಿ, ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಡಾ.ವೆಂಕನಗೌಡ ಪಾಟೀಲ ವಿಶೇಷ ಉಪನ್ಯಾಸ ನೀಡಿದರು.

ಹಿರಿಯ ಸಂಶೋಧನಾಧಿಕಾರಿ ಡಾ.ಕೆ ಪ್ರೇಮ್ುಮಾರ್, ಸಹಾಯಕ ಕುಲಸಚಿವ ಶಹಜಹಾನ್ ಮುದಕವಿ ಮಾತನಾಡಿದರು. ಸಹಾಯಕ ಪ್ರಾಧ್ಯಾಪಕ ಡಾ.ಚಂದ್ರಪ್ಪ ಸೊಬಟಿ ಸ್ವಾಗತಿಸಿದರು. ಜನಪದ ಕಲಾವಿದರಾದ ಶರೀಫ ಮಾಕಪ್ಪನವರ ನಿರೂಪಿಸಿದರು. ಸಹಾಯಕ ಸಂಶೋಧನಾಧಿಕಾರಿ ಡಾ.ಹುಲಗಪ್ಪ ನಾಯಕ ವಂದಿಸಿದರು.