ಹನೂರು: ಶಿಕ್ಷಣ ಸಂಸ್ಥೆಯಲ್ಲಿ ಕಲಿತ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದರ ಮೂಲಕ ಸಾಧನೆಯತ್ತ ಗಮನಹರಿಸಬೇಕು ಎಂದು ಕ್ರಿಸ್ತರಾಜ ಶಿಕ್ಷಣ ಸಂಸ್ಥೆಯ ವ್ಯವಸ್ಥಾಪಕ ರೋಷನ್ ತಿಳಿಸಿದರು.
ಪಟ್ಟಣದ ಕ್ರಿಸ್ತರಾಜ ಶಿಕ್ಷಣ ಸಂಸ್ಥೆಯಲ್ಲಿ ಶನಿವಾರ ದ್ವಿತೀಯ ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿದ್ಯಾರ್ಥಿಗಳ ಶ್ರಮ ಹಾಗೂ ಉಪನ್ಯಾಸಕರ ಸಹಕಾರದಿಂದ ಈ ಬಾರಿ ಕಾಲೇಜಿಗೆ ಶೇ.97.18 ಫಲಿತಾಂಶ ದೊರೆತಿದ್ದು, ತಾಲೂಕಿಗೆ ಪ್ರಥಮ ಸ್ಥಾನ ಪಡೆದಿರುವುದು ಸಂತಸದ ಸಂಗತಿ. ಹಾಗೆಯೇ ವಾಣಿಜ್ಯ ವಿಭಾಗದಲ್ಲಿ ಶಶಾಂಕ್ 600ಕ್ಕೆ 584 ಅಂಕಗಳಿಸುವುದರ ಮೂಲಕ ತಾಲೂಕಿಗೆ ಪ್ರಥಮ ಎನಿಸಿರುವುದು ಮೆಚ್ಚುಗೆ ಸಂಗತಿ. ಇನ್ನು ಬಹುತೇಕ ವಿದ್ಯಾರ್ಥಿಗಳು ಉತ್ತಮ ಅಂಕ ಗಳಿಸುವುದರ ಮೂಲಕ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದು ಕಾಲೇಜಿಗೆ ಕೀರ್ತಿ ತಂದು ಕೊಟ್ಟಿರುವುದು ಹೆಮ್ಮೆಯ ವಿಷಯ. ಹಾಗಾಗಿ ಮುಂದಿನ ಶಿಕ್ಷಣದಲ್ಲಿ ನಿರ್ದಿಷ್ಟ ಗುರಿಯನ್ನು ಹೊಂದಿ ಉತ್ತಮ ವಿಷಯವನ್ನು ಆಯ್ಕೆ ಮಾಡಿಕೊಂಡು ಸಾಧನೆ ಮಾಡಬೇಕು. ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ತಿಳಿಸಿದರು.
ಉಪನ್ಯಾಸಕರಾದ ವಿನೋದ್, ಪ್ರಕಾಶ್, ಸೋಮಣ್ಣ, ಪವಿತ್ರಾ, ಜೈನ್ ಇನ್ನಿತರರಿದ್ದರು.