ಸಿದ್ದಾಪುರ: ಮಹರ್ಷಿ ವಾಲ್ಮೀಕಿ ರಚಿಸಿದ ಮಹಾಕಾವ್ಯ ರಾಮಾಯಣ ಓದಿ ಅದರಲ್ಲಿರುವ ಆದರ್ಶ ಗುಣಗಳನ್ನು ಅಳವಡಿಸಿಕೊಳ್ಳಬೇಕು ಎಂದು ತಹಸೀಲ್ದಾರ್ ಎಂ.ಆರ್. ಕುಲಕರ್ಣಿ ಹೇಳಿದರು.
ಸ್ಥಳೀಯ ತಾಪಂ ಸಭಾಂಗಣದಲ್ಲಿ ಏರ್ಪಡಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪಪಂ ಸದಸ್ಯ ವೆಂಕೋಬ ಕಾರ್ಯಕ್ರಮ ಉದ್ಘಾಟಿಸಿದರು. ಪಪಂ ಸದಸ್ಯರಾದ ನಂದನ ಬೋರ್ಕರ್, ಗುರುರಾಜ ಶಾನಭಾಗ್, ಪುಟ್ಟಪ್ಪ ವಾಲ್ಮೀಕಿ, ತಾಪಂ ಇಒ ದೇವರಾಜ ಹಿತ್ತಲಕೊಪ್ಪ, ಪಪಂ ಮುಖ್ಯಾಧಿಕಾರಿ ಜೆ.ಆರ್.ನಾಯ್ಕ, ರಮೇಶ ಬೇಡರ್, ಮೇಲುಗಿರಿಯಪ್ಪ ತಳವಾರ ಇತರರಿದ್ದರು.
ಬಿಳಗಿ ಜ್ಞಾನಸಾಗರ ಪಪೂ ಕಾಲೇಜಿನ ಉಪನ್ಯಾಸಕ ವಿರೂಪಾಕ್ಷಪ್ಪ ಎಸ್.ಮೇಟಿ ಉಪನ್ಯಾಸ ನೀಡಿದರು.
ಕೃಷಿಯಲ್ಲಿ ಸಾಧನೆ ಮಾಡಿದ ಶಾರದಾ ಪುಟ್ಟಪ್ಪ ವಾಲ್ಮೀಕಿ, ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಪಡೆದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸಮಾಜ ಕಲ್ಯಾಣ ಇಲಾಖೆಯ ಬಸವರಾಜ ಬಂಡೇರ ಸ್ವಾಗತಿಸಿದರು. ವಿನೋದಾ ಜಿ.ನಾಯ್ಕ ವಂದಿಸಿದರು. ಈಶ್ವರ ರಾಗಿಹೊಸಳ್ಳಿ ನಿರ್ವಹಿಸಿದರು.
ಕಾರ್ಯಕ್ರಮದ ಪೂರ್ವದಲ್ಲಿ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರದೊಂದಿಗೆ ಜಾನಪದ ಕಲಾ ತಂಡದೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಿತು.