ಕಂಪ್ಲಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವಿಶ್ವ ತಂಬಾಕುರಹಿತ ದಿನಾಚರಣೆ ನಿಮಿತ್ತ ಜಾಗೃತಿ ಕಾರ್ಯಕ್ರಮ ಶನಿವಾರ ನಡೆಯಿತು. ಡಾ.ಶ್ರೀನಿವಾಸರಾವ್,ವೈದ್ಯರಾದ ಹಾರಿಕಾ, ವಿಶ್ವನಾಥ್, ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಪಿ.ಬಸವರಾಜ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಕೆ.ಶೋಭಾ ಇತರರಿದ್ದರು. 
ಜಿಲ್ಲೆ

ಆರೋಗ್ಯದ ಮೇಲೆ ದುಷ್ಪರಿಣಾಮ

ಗಾಯತ್ರಿ ಮಾಲಿಪಾಟೀಲ್

ಕಂಪ್ಲಿ: ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಇವರ ಸಹಯೋಗದೊಂದಿಗೆ ವಿಶ್ವ ತಂಬಾಕುರಹಿತ ದಿನಾಚರಣೆ ನಿಮಿತ್ತ ಜಾಗೃತಿ ಕಾರ್ಯಕ್ರಮ ಶನಿವಾರ ನಡೆಯಿತು. ದಂತ ವೈದ್ಯ ಶ್ರೀನಿವಾಸರಾವ್ ಮಾತನಾಡಿ, ತಂಬಾಕು ಉತ್ಪನ್ನಗಳ ಬಳಕೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಯುವಜನತೆ ತಂಬಾಕು ಉತ್ಪನ್ನಗಳ ಬಳಕೆಯಿಂದ ವಿಮುಖರಾಗಬೇಕಿದೆ ಎಂದರು. ತಂಬಾಕು ಉತ್ಪನ್ನಗಳ ಸೇವನೆ ಮತ್ತು ಧೂಮಪಾನದಿಂದ ಆರೋಗ್ಯದ ಮೇಲಾಗುವ ದುಷ್ಪರಿಣಾಮಗಳ ಕುರಿತು ಮಾಹಿತಿ ನೀಡಿದರು.