ಜಿಲ್ಲೆ

ಸಾಮಾಜಿಕ ನ್ಯಾಯ ಕೊಡಿಸಲು ಸಲಹೆ

ಹುಬ್ಬಳ್ಳಿ: ಇಲ್ಲಿಯ ಜೆ.ಎಸ್.ಎಸ್. ಸಕ್ರಿ ಕಾನೂನು ಮಹಾವಿದ್ಯಾಲಯದಲ್ಲಿ ಶನಿವಾರ ಸಾಕ್ಷ್ಯ ಅಧಿನಿಯಮ ವಿಚಾರಣೆಯಲ್ಲಿ ಪ್ರಾಯೋಗಿಕ ಅಂಶಗಳ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಸರ್ಕಾರಿ ಅಭಿಯೋಜಕಿ ಗುರುಸಿದ್ದವ್ವ ಪಾಟೀಲ ಮಾತನಾಡಿ, ಸಮಾಜದಲ್ಲೇ ಅತ್ಯಂತ ಘನತೆಯುಳ್ಳ ವೃತ್ತಿ ವಕೀಲ ವೃತ್ತಿ. ವಿದ್ಯಾರ್ಥಿಗಳು ತಮ್ಮ ಮುಂದಿನ ವೃತ್ತಿ ಜೀವನದಲ್ಲಿ ಸಾಮಾಜಿಕ ನ್ಯಾಯ ಒದಗಿಸಿಕೊಡುವತ್ತ ಮುನ್ನುಗ್ಗಬೇಕು ಎಂದರು.
ಪ್ರಾಥಮಿಕ ಮತ್ತು ಮಾಧ್ಯಮಿಕ ಸಾಕ್ಷ್ಯಗಳ ಮಹತ್ವದ ಬಗ್ಗೆ ತಿಳಿಸುತ್ತಾ 100 ಅಪರಾಧಿಗಳನ್ನು ಶಿಕ್ಷೆಗೆ ಗುರಿಪಡಿಸಬಹುದು. ಆದರೆ ಒಬ್ಬ ನಿರಪರಾಧಿಗೆ ಶಿಕ್ಷೆಯಾಗಕೂಡದು ಎಂಬು ಸಿದ್ಧಾಂತದ ಅನುಕರಣೆಯನ್ನು ಗಮನದಲ್ಲಿಟ್ಟುಕೊಂಡು ವಕೀಲರು ತಮ್ಮ ಕಕ್ಷಿದಾರರ ಪರ ವಾದ ಮಂಡಿಸಬೇಕು ಎಂದರು.
ಪ್ರಾಚಾರ್ಯೆ ಡಾ. ರೂಪಾ ಇಂಗಳಹಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾಲೇಜ್‌ನ ಹಳೆಯ ವಿದ್ಯಾರ್ಥಿನಿಯಾಗಿರುವ ಗುರುಸಿದ್ದವ್ವ ಪಾಟೀಲ ಅವರು ಸರ್ಕಾರಿ ಅಭಿಯೋಜಕಿ ಆಗಿ ನೇಮಕವಾಗಿರುವುದರಿಂದ ಅವರನ್ನು ಸನ್ಮಾನಿಸಲಾಯಿತು.
ಪ್ರೊ. ದೀಪಾ ಪಾಟೀಲ, ಬಾಬುಲಾಲ ದರಗದ್, ಪ್ರೊ. ಪೂರ್ಣಿಮಾ ಕುರ್ಡಿಕೇರಿ, ಸತೀಶ ಸಿ.ವಿ., ಸುರೇಶ ಲಮಾಣಿ, ಬಿ.ಎಂ. ನಾಗರತ್ನ, ಬಸಮ್ಮ ಕಟಗಿ, ಸುನೀಲ ರಾಠೋಡ ಇತರರು ಇದ್ದರು.