ಬನ್ನಿಕುಪ್ಪೆಯ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು.  
ಜಿಲ್ಲೆ

ಶೌಚಗೃಹ ನಿರ್ಮಿಸಿಕೊಳ್ಳುವಂತೆ ಸಲಹೆ

ಅಭಿನಯ್ ಎಚ್.ಎಂ

ಬನ್ನಿಕುಪ್ಪೆ: ಇಲ್ಲಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಕಾಲೇಜು, ಪ್ರೌಢಶಾಲೆ, ಹಿರಿಯ ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ ವಿಶ್ವ ಶೌಚಗೃಹ ದಿನವನ್ನು ಆಚರಿಸಲಾಯಿತು.

ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಪಿಡಿಒ ರಾಘವೇಂದ್ರ ಪ್ರಸನ್ನ, ಬಯಲಿನಲ್ಲಿ ಮಲ ಮೂತ್ರ ಮಾಡುವುದು ಒಳ್ಳೆಯ ಬೆಳವಣಿಗೆಯಲ್ಲ. ಹಾಗಾಗಿ ಶೌಚಗೃಹ ನಿರ್ಮಿಸಿಕೊಳ್ಳುವುದು ಒಳಿತು ಎಂದರು.

ಹಸಿ ಮತ್ತು ಒಣ ಕಸವನ್ನು ವಿಂಗಡಿಸಿ ಕಸದ ವಾಹನಕ್ಕೆ ನೀಡಬೇಕು. ನೀರನ್ನು ವ್ಯರ್ಥ ಮಾಡದೆ ಮಿತವಾಗಿ ಬಳಕೆ ಮಾಡಬೇಕು. ಕತೆಗೆ ಶುಚಿತ್ವವನ್ನು ಕಾಪಾಡುವ ಮೂಲಕ ನೀರನ್ನು ಸಂರಕ್ಷಿಸಿ ಗಿಡಗಳನ್ನು ಬೆಳೆಸಬೇಕು ಎಂದು ಸಲಹೆ ನೀಡಿದರು.

ಇದೇ ವೇಳೆ ಮಕ್ಕಳಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು.