ಪಾಂಡವಪುರದ ತಾಲೂಕು ಕಚೇರಿಯಲ್ಲಿ ಬಸವಣ್ಣ ಮತ್ತು ಹೇಮರಡ್ಡಿ ಮಲ್ಲಮ್ಮ ಜಯಂತಿ ಆಚರಿಸಲಾಯಿತು. ಜಿ.ಎಸ್.ಶ್ರೇಯಸ್, ಸಂತೋಷ್, ಡಾ.ಸಿ.ಎ.ಅರವಿಂದ ಇತರರು ಇದ್ದರು. 
ಜಿಲ್ಲೆ

ತತ್ವಾದರ್ಶ ಅಳವಡಿಸಿಕೊಳ್ಳುವಂತೆ ಸಲಹೆ

ಅಭಿನಯ್ ಎಚ್.ಎಂ

ಪಾಂಡವಪುರ; ಬಸವಣ್ಣ ಅವರು 12ನೇ ಶತಮಾನದಲ್ಲಿ ಸಾಮಾಜಿಕವಾಗಿ ಕ್ರಾಂತಿ ಮಾಡಿದ ಮಹಾನ್ ನಾಯಕ ಎಂದು ತಹಸೀಲ್ದಾರ್ ಜಿ.ಎಸ್.ಶ್ರೇಯಸ್ ಹೇಳಿದರು.

ಪಟ್ಟಣದ ತಾಲೂಕು ಆಡಳಿತ ಸೌಧದಲ್ಲಿ ಶುಕ್ರವಾರ ಆಯೋಜಿಸಿದ್ದ ಬಸವ ಜಯಂತಿ ಹಾಗೂ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಬಸವಣ್ಣ ಅವರು ಅನುಭವ ಮಂಟಪದ ಮೂಲಕ ಜನರಿಗೆ ಅರಿವು ಮೂಡಿಸಿದರು. ಅವರ ತತ್ವಾದರ್ಶಗಳನ್ನು ಕಿಂಚಿತ್ತಾದರೂ ನಾವುಗಳು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದ ಕರೆ ನೀಡಿದರು.

ಗ್ರೇಡ್2 ತಹಸೀಲ್ದಾರ್ ಎಸ್.ಸಂತೋಷ್, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಚಂದ್ರಶೇಖರ್, ವೀರಶೈವ-ಲಿಂಗಾಯಿತ ಮಹಾಸಭಾದ ತಾಲೂಕು ಅಧ್ಯಕ್ಷ ನಿರಂಜನಬಾಬು, ಮಾಜಿ ಅಧ್ಯಕ್ಷ ಎಸ್.ಮಂಜುನಾಥ್, ದಸಂಸ ಮುಖಂಡ ಡಿ.ಕೆ.ಅಂಕಯ್ಯ, ವೀರಶೈವ ಲಿಂಗಾಯತ ಸಮಾಜದ ಮುಖಂಡರಾದ ಮಂಡಿಬೆಟ್ಟಹಳ್ಳಿ ಜಗದೀಶ್, ಕೈಲಾಸ್, ಹಾಗನಹಳ್ಳಿ ಜಗದೀಶ್ ಇತರರಿದ್ದರು.