ಜಿಲ್ಲೆ

ಆದ್ಯಪಾಡಿ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ

Mangaluru - Shravan Kumar Nala

ಮಂಗಳೂರು: ಆದ್ಯಪಾಡಿ ಶ್ರೀ ಆದಿನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಶುಭ ಸಂದರ್ಭದಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕ ಡಾ. ವೈ ಭರತ್ ಶೆಟ್ಟಿ ಹಾಗೂ ದಕ್ಷಿಣ ಕನ್ನಡದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ವಿಶೇಷ ಮುತುವರ್ಜಿಯಲ್ಲಿ 63 ಲಕ್ಷ ವೆಚ್ಚದಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಭಾನುವಾರ ನೆರವೇರಿತು.

ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಶಾಸಕ ಡಾ. ವೈ ಭರತ್ ಶೆಟ್ಟಿ ವಿವಿಧ ಅಭಿವೃದ್ದಿ ಕಾಮಗಾರಿಗಳನ್ನು ಉದ್ಘಾಟಿಸಿದರು. ಶಾಸಕರ ವಿಶೇಷ ಪ್ರಯತ್ನದಲ್ಲಿ ಸುಮಾರು 10 ಲಕ್ಷ ರೂಪಾಯಿ ವೆಚ್ಚದ ತಡೆಗೋಡೆ, 8 ಲಕ್ಷ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಗೊಂಡ ರಸ್ತೆ, 15 ಲಕ್ಷ ರೂಪಾಯಿ ವೆಚ್ಚದಲ್ಲಿ ಇಂಟರ್‌ಲಾಕ್ ಅಳವಡಿಕೆ, 10 ಲಕ್ಷ ರೂಪಾಯಿ ವೆಚ್ಚದಲ್ಲಿ ಆದ್ಯಪಾಡಿ ದೇವಸ್ಥಾನದಿಂದ ಅರ್ಬಿಕೋಡಿ ಮತ್ತು ಆದ್ಯಪಾಡಿ ದೇವಸ್ಥಾನದಿಂದ ಆದ್ಯಪಾಡಿ ಶಾಲೆವರೆಗಿನ ರಸ್ತೆ ಬದಿಯಲ್ಲಿ ದಾರಿದೀಪ ಅಳವಡಿಕೆ ಹಾಗೂ ಸಂಸದರ ಅಭಿವೃದ್ಧಿ ನಿಧಿಯ ಸುಮಾರು 20 ಲಕ್ಷ ರೂಪಾಯಿ ವೆಚ್ಚದಲ್ಲಿ ರಸ್ತೆ ಕಾಮಗಾರಿಯು ಲೋಕಾರ್ಪಣೆಯಾಯಿತು.

ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ಸ್ಥಳೀಯ ಪಂಚಾಯಿತಿ ಅಧ್ಯಕ್ಷರು ಸದಸ್ಯರು, ಪಕ್ಷದ ಕಾರ್ಯಕರ್ತರು, ಭಗವದ್ಭಕ್ತರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.