ಜಿಲ್ಲೆ

ಅಂತಾರಾಜ್ಯ ಅಫೀಮು ಪೆಡ್ಲರ್ ಬಂಧನ

Dharwada - Basavaraj Idli

ಹುಬ್ಬಳ್ಳಿ: ಇಲ್ಲಿಯ ತಿಮ್ಮಸಾಗರ ರಸ್ತೆಯ ಪಾಳು ಬಿದ್ದ ಕಟ್ಟಡವೊಂದರಲ್ಲಿ ಅಫೀಮು ಮಾರಾಟ ಮಾಡುತ್ತಿದ್ದ ಮೂವರು ಅಂತಾರಾಜ್ಯ ಅಫೀಮು ಪೆಡ್ಲರ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರಾಜಸ್ಥಾನ ಮೂಲದ ವಿಕಾಸ್ ಬಿಷ್ಣೊಯ್, ಜೈಸಾರಾಮ್ ಚೌದರಿ ಹಾಗೂ ರಾಮರಾಮ ಬಿಷ್ಣೊಯ್ ಬಂಧಿತ ಡ್ರಗ್ಸ್ ಪೆಡ್ಲರ್ ಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಹಳೇಹುಬ್ಬಳ್ಳಿ ಠಾಣೆ ಪಿಐ ನೇತೃತ್ವದ ತಂಡವು ದಾಳಿ ಮಾಡಿ ಆರೋಪಿಗಳಿಂದ 23,500 -ರೂ. ಮೌಲ್ಯದ 46 ಗ್ರಾಂ ಅಫೀಮು, ಒಂದು ದ್ವಿಚಕ್ರ ವಾಹನ, ಮೂರು ಮೊಬೈಲ್ ಫೋನ್ ಸೇರಿದಂತೆ ಒಟ್ಟು 1.29 ಲಕ್ಷ ರೂ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡಿದೆ.

ಈ ಕುರಿತು ಹಳೇಹುಬ್ಬಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.