ನೆಲಮಂಗಲ: ಪತಿಯ ಮರಣದಿಂದ ಮಾನಸಿಕವಾಗಿ ನೊಂದ ಪತ್ನಿ ಹಾಗೂ ಪುತ್ರ ರೈಲಿಗೆ ತಲೆಯೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಬೈರನಾಯಕನಹಳ್ಳಿ ಬಳಿ ಈ ಪ್ರಕರಣ ನಡೆದಿದೆ.
ಚಿಕ್ಕಬಾಣಾವರ ಸಮೀಪದ ಸೋಮಶೆಟ್ಟಿಹಳ್ಳಿ ಗ್ರಾಮದ ನಿವಾಸಿ ರೇಖಾ (40), ಅವರ ಪುತ್ರ ಮನೋಜ್ (21) ಮೃತಪಟ್ಟವರು. ಇವರು ಕಳೆದ ರಾತ್ರಿ ಬೆಂಗಳೂರಿನಿಂದ ಹುಬ್ಬಳ್ಳಿಗೆ ತೆರಳುವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರೇಖಾ ಅವರ ಪತಿ ಕೆಲವು ತಿಂಗಳ ಹಿಂದಷ್ಟೇ ಮೃತಪಟ್ಟಿದ್ದರು. ಇದರಿಂದ ಅವರು ಹಾಗೂ ಅವರ ಪುತ್ರ ಇಬ್ಬರೂ ಮಾನಸಿಕವಾಗಿ ತೀವ್ರ ನೊಂದಿದ್ದರು. ಕೊನೆಗೂ ಅಗಲಿಕೆಯ ನೋವನ್ನು ಸಹಿಸಿಕೊಳ್ಳಲಾಗದೆ ತಾಯಿ-ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಸ್ಥಳಕ್ಕೆ ಧಾವಿಸಿದ ಯಶವಂತಪುರ ರೈಲ್ವೇ ಪೊಲೀಸ್ರು ಪರಿಶೀಲನೆ ನೆಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.