ಜಿಲ್ಲೆ

ಕ್ರೀಡೆಗೆ ವಯಸ್ಸಿನ ಮಿತಿ ಇಲ್ಲ : ಜಿಲ್ಲಾಧಿಕಾರಿ ವೈಶಾಲಿ. ಎಂ. ಎಲ್

Gadag - Shivanand Hiremath

ಗದಗ: ಹಿರಿಯ ನಾಗರಿಕರು ತಮ್ಮ ದೈನಂದಿನ ಚಟುವಟಿಕೆಗಳಿಂದ ಮನೆಯಲ್ಲಿ ಮಕ್ಕಳ ಜೊತೆಗೆ ಕ್ರೀಡೆಯಲ್ಲಿ ತೊಡಗುವುದರಿಂದ ಉತ್ತಮ ಆರೋಗ್ಯವನ್ನು ಹೊಂದಬೇಕು ಹಾಗೂ ಸದೃಢರಾಗಿರಬೇಕು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್.ಅವರು ತಿಳಿಸಿದರು.

ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಿಕಲಚೇತನರ ಹಾಗೂ ಹಿರಿಯ ನಾಗರಿಕರು ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಹಿರಿಯ ನಾಗರಿಕ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆ ಮತ್ತು ಸಂಘಗಳ ಸಹಯೋಗದಲ್ಲಿ  ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರದಂದು  ವಿಶ್ವ ಹಿರಿಯ ನಾಗರಿಕ ದಿನಾಚರಣೆ 2023 ಪ್ರಯುಕ್ತ ಜಿಲ್ಲಾ ಮಟ್ಟದ ಹಿರಿಯ ನಾಗರಿಕರ ಕ್ರೀಡಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ  ಮಾತನಾಡಿದರು.

ಹಿರಿಯ ನಾಗರಿಕರು ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ಹಿರಿಯರು  ಉತ್ತಮ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಹೊಂದುವರು, ಕ್ರೀಡೆಯಿಂದ ಮನಸ್ಸಿನಿಂದ ಎಲ್ಲರನ್ನೂ ಹತ್ತಿರ ಮಾಡಿಕ್ಕೊಳುವರು, ದೈಹಿಕ ಮತು ಮಾನಸಿಕ ಆರೋಗ್ಯ ಎರಡೂ ಹಿರಿಯರಿಗೆ ಮುಖ್ಯವಾದದ್ದು,  ಯುವ ಪೀಳಿಗೆಗೆ ಪುಸ್ತಕಗಳನ್ನು ಓದುವ ಅಭ್ಯಾಸವನ್ನು ರೂಡಿ ಮಾಡಬೇಕು, ಸರ್ಕಾರದ ಸವಲತ್ತುಗಳನ್ನು ಎಲ್ಲರೂ ಸದುಪಯೋಗ ಪಡೆದುಕೊಳ್ಳಬೇಕು  ಎಂದು ತಿಳಿಸಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಕೆ. ಗುರುಪ್ರಸಾದ  ಅವರು   ಜಿಲ್ಲಾ ಮಟ್ಟದ ಹಿರಿಯ ನಾಗರಿಕರ ಕ್ರೀಡಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ  ಹಿರಿಯ ನಾಗರಿಕರು ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಬಹುದಾಗಿದೆ. ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಉತ್ಸಾಹದಿಂದ ಕ್ರೀಡೆಯಲ್ಲಿ ಪಾಲ್ಗೊಳ್ಳಬೇಕು. ಹಿರಿಯ ನಾಗರಿಕರಿಗಾಗಿ ಸರ್ಕಾರದಿಂದ ಅನುಷ್ಟಾನಿತಗೊಂಡ ವಿವಿಧ ಯೋಜನೆಗಳ ಸೌಲಭ್ಯದ ಸದುಪಯೋಗವಾಗಬೇಕು ಎಂದು ತಿಳಿಸಿದರು.       

ಸಮಾರಂಭದಲ್ಲಿ  ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಾಯಕ ನಿರ್ದೇಶಕಿ ರಾಧಾ ಮಣ್ಣೂರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶರಣು ಗೋಗೇರಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ.ಎ.ರಡ್ಡೇರ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕ ಕಲ್ಯಾಣ ಅಧಿಕಾರಿ ಕೆ.ಮಹಾಂತೇಶ ಹಾಗೂ ಸಿಬ್ಬಂದಿಗಳು,ಕ್ರೀಡಾ ಇಲಾಖೆಯ ನಿರ್ಣಾಯಕರು, ಸಂಘ ಸಂಸ್ಥೆಯ ಅಧಿಕಾರಿಗಳು ಮತ್ತು ಹಿರಿಯ ಕ್ರೀಡಾಪಟುಗಳು ಸಮಾರಂಭದಲ್ಲಿ ಭಾಗಿಯಾಗಿದ್ದರು. ಎಂ.ಸಿ. ವಗ್ಗಿ ಕಾರ್ಯಕ್ರಮ ನಿರೂಪಿಸಿದರು. ಆರ್.ಟಿ.ನಾರಯಣಪೂರ ವಂದಿಸಿದರು