ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ
ಇವರ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಶ್ರೀ ಅಗ್ನಿಬನ್ನಿರಾಯ ಜಯಂತಿಯನ್ನು, ಜಿಲ್ಲಾಧಿಕಾರಿ ಕಚೇರಿ ಸಭಾಭವನದಲ್ಲಿ ಅಪರ
ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಅವರು ಅಗ್ನಿಬನ್ನಿರಾಯ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ
ಆಚರಿಸಲಾಯಿತು.
ಆಯುಷ್ ಇಲಾಖೆಯ ವೈದ್ಯಾಧಿಕಾರಿ ಡಾ. ಮಲ್ಲಿಕಾರ್ಜುನ ಹಿರೇಮಠ ಅಗ್ನಿಬನ್ನಿರಾಯ ಸ್ವಾಮಿಯವರ ಕುರಿತು ವಿಶೇಷ
ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಸಹಾಯಕ ನಿರ್ದೇಶಕಿ ಮಂಗಲಾ ಎಂ ನಾಯ್ಕ, ಶಿಕ್ಷಕ ಮಹಾದೇವ ರಾಣೆ, ಅಂಗನವಾಡಿ
ಕಾರ್ಯಕರ್ತೆಯರು, ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.