ಹುಬ್ಬಳ್ಳಿ: ಇಲ್ಲಿಯ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಚಂದ್ರವದನ ದೇಸಾಯಿ ಸಭಾಗೃಹದಲ್ಲಿ ಫೆ. 21ರಂದು ಬೆಳಗ್ಗೆ 10.30ಕ್ಕೆ ಕೃಷಿ ಮಾರಾಟ ಇಲಾಖೆ ಹಾಗೂ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಶಿವಾನಂದ ಕಾಪಶಿ ಇವರೊಂದಿಗೆ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಎಪಿಎಂಸಿ ಸಮಸ್ಯೆಗಳ ಕುರಿತು ವರ್ತಕರ ಸಂವಾದ ಆಯೋಜಿಸಲಾಗಿದೆ. ವರ್ತಕರು ಹಾಗೂ ಸದಸ್ಯರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಸಂಸ್ಥೆಯ ಗೌರವ ಕಾರ್ಯದರ್ಶಿ ರವೀಂದ್ರ ಎಸ್. ಬಳಿಗಾರ ಕೋರಿದ್ದಾರೆ.