ಜಿಲ್ಲೆ

ಕೃವಿವಿ ಘಟಿಕೋತ್ಸವ 14ರಂದು

Dharwada - Vikram Nadiger

ವಿಜಯವಾಣಿ ಸುದ್ದಿಜಾಲ ಧಾರವಾಡ

ನಗರದ ಕೃಷಿ ವಿಶ್ವ ವಿದ್ಯಾಲಯದ 38ನೇ ಘಟಿಕೋತ್ಸವವನ್ನು ಮೇ 14ರಂದು ಬೆಳಗ್ಗೆ 10 ಗಂಟೆಗೆ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಏರ್ಪಡಿಸಲಾಗಿದೆ.

ರಾಜ್ಯಪಾಲ ಥಾವರಚಂದ್​ ಗೆಹಲೋತ್​ ಅಧ್ಯಕ್ಷತೆ ವಹಿಸಿ ಪದವಿ ಹಾಗೂ ಪ್ರಶಸ್ತಿಗಳನ್ನು ಪ್ರದಾನ ಮಾಡುವರು. ಐಸಿಎಆರ್-ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ. ಚಿ. ಶ್ರೀನಿವಾಸ ರಾವ್​ ಅತಿಥಿಯಾಗಿ ಆಗಮಿಸುವರು. ಕೃಷಿ ಸಚಿವ ಎನ್​. ಚೆಲುವರಾಯಸ್ವಾಮಿ ಉಪಸ್ಥಿತರಿರುವರು. ಕೃವಿವಿ ಕುಲಪತಿ ಡಾ. ಪಿ.ಎಲ್​. ಪಾಟೀಲ ವರದಿ ಮಂಡಿಸುವರು. ವಿಶ್ವ ವಿದ್ಯಾಲಯದ ವ್ಯವಸ್ಥಾಪನಾ ಮಂಡಳಿ ಹಾಗೂ ವಿದ್ಯಾವಿಷಯಕ ಪರಿಷತ್ ಸದಸ್ಯರು ಉಪಸ್ಥಿತರಿರುವರು.

ಘಟಿಕೋತ್ಸವದಲ್ಲಿ 41 ಪಿಎಚ್​.ಡಿ, 197 ಸ್ನಾತಕೋತ್ತರ ಹಾಗೂ 625 ಸ್ನಾತಕ ಪದವಿಗಳನ್ನೊಳಗೊಂಡಂತೆ ಒಟ್ಟು 863 ಅಭ್ಯರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು. ಒಟ್ಟು 64 ಚಿನ್ನದ ಪದಕ ಹಾಗೂ 9 ನಗದು ಬಹುಮಾನಗಳನ್ನು ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.