ಸುಳ್ಯ: ದ.ಕ. ಜಿಲ್ಲಾ ಪಂಚಾಯಿತಿ ಮಂಗಳೂರು, ಕೃಷಿ ಇಲಾಖೆ ಸುಳ್ಯ ನೇತೃತ್ವದಲ್ಲಿ ರೈತ ಬಾಂಧವರಿಗೆ ಧನ್ ಧಾನ್ಯ ಕೃಷಿ ಯೋಜನೆ ಮೂಲಕ ಕೃಷಿ ಪರಿಯೋಜನೆ ಅರ್ಪಣೆ ಕಾರ್ಯಕ್ರಮ ಶನಿವಾರ ಕೃಷಿ ಇಲಾಖೆ ಸಭಾಂಗಣದಲ್ಲಿ ನಡೆಯಿತು.
ಕೃಷಿಕ ಸಮಾಜದ ಅಧ್ಯಕ್ಷ ಎ.ಟಿ.ಕುಸುಮಾಧರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸುಳ್ಯ ರೈತ ಉತ್ಪಾದಕ ಕಂಪನಿ ಅಧ್ಯಕ್ಷ ವೀರಪ್ಪ ಗೌಡ ಕಣ್ಕಲ್, ಕೃಷಿಕ ಸಮಾಜದ ಜಿಲ್ಲಾ ಉಪಾಧ್ಯಕ್ಷ ಚಂದ್ರ ಕೋಲ್ಚಾರ್, ಕೃಷಿ ಇಲಾಖಾ ಜೆಡಿ ಶಿವಶಂಕರ್ ದಾನಗೊಂಡರ್, ಸಹಾಯಕ ಕೃಷಿ ನಿರ್ದೇಶಕ ಗುರುಪ್ರಸಾದ್ ಎಂ.ಎಸ್., ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಎ.ನೀರಬಿದರೆ ಉಪಸ್ಥಿತರಿದ್ದರು.
ಸಹಾಯಕ ಕೃಷಿ ನಿರ್ದೇಶಕ ಗುರುಪ್ರಸಾದ್ ಎಂ.ಎಸ್. ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ತಾಲೂಕಿನ ವಿವಿಧ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರು, ಕಾರ್ಯನಿರ್ವಾಹಣಾಧಿಕಾರಿಗಳು, ರಸ ಗೊಬ್ಬರ ಮಾರಾಟ ಪ್ರತಿನಿಧಿಗಳು ಮತ್ತಿತರರು ಉಪಸ್ಥಿತರಿದ್ದರು.