ಜಿಲ್ಲೆ

ಕೃಷಿ ಮಾಹಿತಿ ಕಾರ್ಯಾಗಾರ

Avinash R

ಗುರುಪುರ: ಇಲ್ಲಿನ ವ್ಯವಸಾಯ ಸೇವಾ ಸಹಕಾರಿ ಸಂಘದ ವತಿಯಿಂದ ಗುರುಪುರ ಕುಕ್ಕುದಕಟ್ಟೆಯ ಶ್ರೀ ವೈದ್ಯನಾಥ ಕಲ್ಯಾಣ ಸಮುದಾಯ ಭವನದಲ್ಲಿ ಸೆ.23ರಂದು ಮಧ್ಯಾಹ್ನ 2 ಗಂಟೆಗೆ ಕೃಷಿ ಮಾಹಿತಿ ಮತ್ತು ಸರ್ಕಾರದಿಂದ ಕೃಷಿಕರಿಗೆ ಸಿಗುವ ಸೌಲಭ್ಯಗಳ ಮಾಹಿತಿ ಕಾರ್ಯಾಗಾರ ನಡೆಯಲಿದೆ.

ಸಂಘದ ಅಧ್ಯಕ್ಷ ಓಂಪ್ರಕಾಶ್​ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕೃಷಿ ಮಾಹಿತಿ ಕಾರ್ಯಾಗಾರದಲ್ಲಿ ಮಂಗಳೂರು ಸಹಾಯಕ ಕೃಷಿ ನಿರ್ದೇಶಕಿ ವೀಣಾ ಕೆ.ಆರ್​., ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಕೆ.ಪ್ರವಿಣ್​, ಬಜ್ಪೆ ಪಶು ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ.ಅಶೋಕ್​ ಕೆ.ಆರ್​. ಮತ್ತು ಮಂಗಳೂರು ಕೃಷಿ ವಿಜ್ಞಾನ ಕೇಂದ್ರದ ಸಸ್ಯ ಸಂರಕ್ಷಣೆ ವಿಜ್ಞಾನಿ ಡಾ.ಕೇದಾರನಾಥ ಮಾಹಿತಿ ನೀಡಲಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.