ನಾವೂರು ಗ್ರಾಮದಲ್ಲಿ ಶಾಸಕರು ನೆರೆ ನೀರು ನುಗ್ಗಿರುವ ಮನೆಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ತಹಸೀಲ್ದಾರ್ ಅರ್ಚನಾ ಭಟ್ ಹಾಗೂ ಕಂದಾಯಾಧಿಕಾರಿಗಳು ಉಪಸ್ಥಿತರಿದ್ದರು. 
ಜಿಲ್ಲೆ

ಶಾಸಕರಿಂದ ಪರಿಸ್ಥಿತಿ ಅವಲೋಕನ : ಸೂಕ್ತ ವ್ಯವಸ್ಥೆಗೆ ತಹಸೀಲ್ದಾರ್‌ಗೆ ಸೂಚನೆ

ಸೌಮ್ಯ ಆರ್

ಬಂಟ್ವಾಳ: ತಾಲೂಕಿನ ಹಲವೆಡೆ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದ್ದು ಶಾಸಕ ರಾಜೇಶ್ ನಾಯ್ಕ್ ಭೇಟಿ ನೀಡಿ ಸಂತ್ರಸ್ತ ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡುವಂತೆ ತಹಸೀಲ್ದಾರ್‌ಗೆ ಸೂಚನೆ ನೀಡಿದರು.

ನಾವೂರ ಗ್ರಾಮದ ಮೈಂದಾಳ ಎಂಬಲ್ಲಿ 8 ಮನೆಗಳಿಗೆ ನೀರು ನುಗ್ಗಿದ್ದು, ಶಾಸಕರು ಸ್ಥಿತಿಗತಿ ಅವಲೋಕಿಸಿದರು. ತಾಲೂಕಿನ ಪಾಣೆಮಂಗಳೂರು, ಬಂಟ್ವಾಳ, ನಾವೂರು, ಸರಪಾಡಿ, ಮಣಿನಾಲ್ಕೂರು ಗ್ರಾಮಗಳಲ್ಲಿ ಕೃಷಿ ತೋಟಗಳು, ಗದ್ದೆಗಳು ಮುಳುಗಡೆಯಾಗಿದ್ದು ಶಾಸಕರು ವೀಕ್ಷಣೆ ನಡೆಸಿದರು.

ನೆರೆ ಬಂದು ಹೋದ ಬಳಿಕ ಮನೆಗಳಲ್ಲಿ ಕೆಸರು ತುಂಬಿಕೊಂಡಿರುತ್ತದೆ. ಅಂತಹ ಮನೆಗಳ ಕೆಸರು ತೆಗೆಯಲು ತಾಲೂಕು ಆಡಳಿತ ಸೂಕ್ತವಾದ ವ್ಯವಸ್ಥೆ ಮಾಡುವಂತೆ ತಹಸೀಲ್ದಾರ್ ಅವರಿಗೆ ಸೂಚನೆ ನೀಡಿರುವುದಾಗಿ ಶಾಸಕರು ತಿಳಿಸಿದರು.

ತಹಸೀಲ್ದಾರ್ ಅರ್ಚನಾ ಭಟ್, ಕಂದಾಯ ನಿರೀಕ್ಷಕ ಜನಾರ್ದನ, ಗ್ರಾಮಾಂತರ ಎಸ್‌ಐ ಹರೀಶ್, ಜಿಲ್ಲಾ ಕಾರ್ಯದರ್ಶಿ ದೇವಪ್ಪ ಪೂಜಾರಿ, ಬಿಜೆಪಿ ಪ್ರಮುಖರಾದ ಎ.ಗೋವಿಂದ ಪ್ರಭು, ನಂದರಾಮ ರೈ, ಗಣೇಶ್ ರೈ ಮಾಣಿ, ಜನಾರ್ದನ, ಸದಾನಂದ ನಾವೂರ, ಧನಂಜಯ ಶೆಟ್ಟಿ ಸರಪಾಡಿ, ಅಶೋಕ್ ಶೆಟ್ಟಿ ಸರಪಾಡಿ, ದೇಜಪ್ಪ ಬಾಚಕೆರೆ, ಶಾಂತಪ್ಪ ಪೂಜಾರಿ ಹಟ್ಟದಡ್ಕ, ಚಂದ್ರಹಾಸ ಶೆಟ್ಟಿ ಹೊಳ್ಳರ ಗುತ್ತು, ಆನಂದ ಶೆಟ್ಟಿ ಬಾಚಕೆರೆ ಉಪಸ್ಥಿತರಿದ್ದರು.