ಕೃಷಿ ಉತ್ಪನ್ನಗಳ ಕನಿಷ್ಠ ಬೆಂಬಲ ಬೆಲೆ ಕಾಯ್ದೆ ರಕ್ಷಿಸುವಂತೆ ಒತ್ತಾಯಿಸಿ ಸಿಂಧನೂರಿನಲ್ಲಿ ಕರ್ನಾಟಕ ರೈತ ಸಂಘ ತಾಲೂಕು ಸಮಿತಿ ಸಿಂಧನೂರಲ್ಲಿ ಶಿರಸ್ತೇದಾರ್‌ಗೆ ಮನವಿ ಸಲ್ಲಿಸಿತು. 
ಜಿಲ್ಲೆ

ಕೃಷಿ ಉತ್ಪನ್ನಗಳ ಕನಿಷ್ಠ ಬೆಂಬಲ ಬೆಲೆ ಕಾಯ್ದೆ ರಕ್ಷಿಸಿ; ಕರ್ನಾಟಕ ರೈತ ಸಂಘ ತಾಲೂಕು ಸಮಿತಿ ಆಗ್ರಹ

ಸಿಂಧನೂರು: ಕೃಷಿ ಉತ್ಪನ್ನಗಳ ಕನಿಷ್ಠ ಬೆಂಬಲ ಬೆಲೆ ಕಾಯ್ದೆ ರಕ್ಷಿಸುವಂತೆ ಒತ್ತಾಯಿಸಿ ಕರ್ನಾಟಕ ರೈತ ಸಂಘ ತಾಲೂಕು ಸಮಿತಿ ತಹಸಿಲ್ ಕಚೇರಿ ಶಿರಸ್ತೇದಾರ್ ವಾಣಿಶ್ರೀಗೆ ಬುಧವಾರ ಮನವಿ ಸಲ್ಲಿಸಿತು.

ಎಂಎಸ್ ಸ್ವಾಮಿನಾಥನ್ ಆಯೋಗದ ವರದಿ ಜಾರಿಗೊಳಿಸಬೇಕು. ಕನಿಷ್ಠ ಬೆಂಬಲ ಬೆಲೆ ಕಾನೂನನ್ನು ಹೊಸ ಕೃಷಿ ಕಾಯ್ದೆಯಲ್ಲಿ ಸೇರ್ಪಡೆ ಮಾಡಬೇಕು. ರೈತರ ಕೃಷಿ ಉತ್ಪನ್ನಗಳನ್ನು ಖರೀದಿಸುವ ಯಾವುದೇ ಕಂಪನಿ ಮತ್ತು ಖರೀದಿದರರು ಕನಿಷ್ಠ ಬೆಲೆಯ ಷರತ್ತನ್ನು ಉಲ್ಲಂಘಿಸದಂತೆ ಕಟ್ಟುನಿಟ್ಟಿನ ಕ್ರಮ ಅಳವಡಿಸಿಕೊಳ್ಳಬೇಕು. ಆಹಾರ ಸಂಗ್ರಹ ಮತ್ತು ವಿತರಣೆಯಲ್ಲಿ ಕಾನೂನು ಉಲ್ಲಂಘನೆ ಆಗದಂತೆ ಎಚ್ಚರವಹಿಸಬೇಕು. ಶಿಕ್ಷಾರ್ಹ ಅಪರಾಧ ಎಸಗುವವರನ್ನು ಬಂಧಿಸಬೇಕು. ರಾಜ್ಯದ ಪ್ರತಿ ಗ್ರಾಪಂಗೊಂದು ಸರ್ಕಾರಿ ಖರೀದಿ ಕೇಂದ್ರ ತೆರೆದು ಸಜ್ಜೆ, ಮೆಕ್ಕೆಜೋಳ, ಸೂರ್ಯಕಾಂತಿ, ಹೈಬ್ರಿಡ್ ಜೋಳ, ಭತ್ತ ಇತರ ಕೃಷಿ ಉತ್ಪನ್ನಗಳನ್ನು ಖರೀದಿಸಿ ರೈತರ ನೆರವಿಗೆ ಧಾವಿಸುವಂತೆ ಒತ್ತಾಯಿಸಲಾಯಿತು.

ಕೆಆರ್‌ಎಸ್ ತಾಲೂಕು ಅಧ್ಯಕ್ಷ ರಮೇಶ ಪಾಟೀಲ್ ಬೇರ‌್ಗಿ, ಕಾರ್ಯದರ್ಶಿ ಬಸವರಾಜ ಬೆಳಗುರ್ಕಿ, ಮುಖಂಡರಾದ ಬಿ.ಎನ್.ಯರದಿಹಾಳ, ಚಿಟ್ಟಿಬಾಬು, ಶ್ರೀನಿವಾಸ ಬುಕ್ಕನಹಟ್ಟಿ, ಶಿವಕುಮಾರ, ಯಲ್ಲಮ್ಮ, ಲಕ್ಷ್ಮಣ, ನಾಗರಾಜ, ಅಮರೇಶ ನಾಯಕ, ಮೌನೇಶ ಗೌಡಗೇರಿ, ರಮೇಶ, ಆಂಜನೇಯ ಇದ್ದರು.