ಬ್ಯಾಡಗಿ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಹಾವು ಕಚ್ಚಿ ಮೃತಟ್ಟ ಟನೆ ತಾಲೂಕಿನ ಗುಂಗರಕೊಪ್ಪ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಗ್ರಾಮದ ಹೂವಕ್ಕ ಮಲ್ಲೇಶಪ್ಪ ಮಟ್ಟಿಮನಿ (42) ಮೃತ ಮಹಿಳೆ.
ಇವರು ಜಮೀನಿನಲ್ಲಿ ಕೃಷಿ ಕಾರ್ಯದಲ್ಲಿ ತೊಡಗಿದ ಸಮಯದಲ್ಲಿ ಹಾವು ಕಚ್ಚಿದೆ. ಕೂಡಲೇ ಅವರನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.