ಕಾಸರಗೋಡು: ಹದಿನೆಂಟನೇ ಶತಮಾನದಲ್ಲಿ ಮಾಲ್ವಾದ ದೊರೆಯಾಗಿ ಭಾರತೀಯ ರಾಜಕಾರಣವನ್ನು ಮುನ್ನಡೆಸಿದ್ದ ಅಹಲ್ಯಾ ಹೋಳ್ಕರ್, ಭಾರತೀಯ ಮಹಿಳೆಯರಿಗೆ ಆದರ್ಶಪ್ರಾಯರಾಗಿರುವುದಲ್ಲದೆ ಸ್ತ್ರೀಶಕ್ತಿಯ ಸಂಕೇತವಾಗಿ ಗುರುತಿಸಿರುವುದಾಗಿ ಬಿಜೆಪಿ ಮಾಜಿ ರಾಜ್ಯ ಸಮಿತಿ ಕಾರ್ಯದರ್ಶಿ ವಿ.ಕೆ.ಸಜೀವನ್ ತಿಳಿಸಿದ್ದಾರೆ.
ಬಿಜೆಪಿ ಕಾಸರಗೋಡು ಜಿಲ್ಲಾ ಸಮಿತಿ ಕಚೇರಿಯಲ್ಲಿ ಅಹಲ್ಯಾಬಾಯಿ ಹೋಳ್ಕರ್ 300ನೇ ಜನ್ಮದಿನಾಚರಣೆ ಅಂಗವಾಗಿ ಬಿಜೆಪಿ ಜಿಲ್ಲಾ ಸಮಿತಿ ಆಯೋಜಿಸಿದ್ದ ಸೌಹಾರ್ದ ಸಂಗಮ ಉದ್ಘಾಟಿಸಿ ಮಾತನಾಡಿದರು.
ಬಿಜೆಪಿ ಜಿಲ್ಲಾಧ್ಯಕ್ಷೆ ಎಂ.ಎಲ್.ಅಶ್ವಿನಿ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ರಾಜ್ಯ ಸಮಿತಿ ಸದಸ್ಯೆ ಸವಿತಾ ಅವರನ್ನು ಸನ್ಮಾನಿಸಲಾಯಿತು. ಮಾಜಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ವೇಲಾಯುಧನ್ ಉಪಸ್ಥಿತರಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಆರ್.ಸುನೀಲ್ ಸ್ವಾಗತಿಸಿದರು. ಕಾರ್ಯದರ್ಶಿ ಪುಷ್ಪಾಗೋಪಾಲನ್ ವಂದಿಸಿದರು.