ಹುಬ್ಬಳ್ಳಿ: ನಗರದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಕರ್ನಾಟಕ ಅಲ್ಪಸಂಖ್ಯಾತರ ಹಿಂದುಳಿದವರ ದಲಿತರ (ಅಹಿಂದ) ಒಕ್ಕೂಟದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ನೂತನ ಅಧ್ಯಕ್ಷರಾಗಿ ಚಂದ್ರಶೇಖರ ಎಂ. ಕರಡಿಕೊಪ್ಪ ಅವರನ್ನು ಆಯ್ಕೆ ಮಾಡಲಾಗಿದೆ.
ಒಕ್ಕೂಟದ 9 ಜನ ಕಾರ್ಯಕಾರಿಣಿ ಸಮಿತಿ ಪದಾಧಿಕಾರಿಗಳು ಭಾಗಿಯಾಗಿದ್ದ ಸಭೆಯಲ್ಲಿ ಹಾಜರಿದ್ದ ಎಲ್ಲರೂ ಕರಡಿಕೊಪ್ಪ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಿದರು. ವಿವಿಧ ಘಟಕಗಳಿಗೆ ಪದಾಧಿಕಾರಿಗಳನ್ನು ಆರಿಸಲಾಯಿತು.
ಒಬಿಸಿ ಘಟಕದ ರಾಜ್ಯಾಧ್ಯಕ್ಷರಾಗಿ ಎಚ್.ಎಂ. ಕೃಷ್ಣ, ಸಂಘಟನಾ ಕಾರ್ಯದರ್ಶಿರ್ಯಾಗಿ ವಿಠ್ಠಲ ಪೂಜಾರಿ ಅವರನ್ನು ಆಯ್ಕೆ ಮಾಡಲಾಯಿತು.
ಉಪಾಧ್ಯಕ್ಷ ಡಿ.ಡಿ. ಮೇಚಣ್ಣನವರ, ಪ್ರಧಾನ ಕಾರ್ಯದರ್ಶಿ ಮಾಲತೇಶ ಬಣಕಾರ, ಸಹಕಾರ್ಯದರ್ಶಿ ರೇಣುಕಾ ಇಬ್ರಾಹಿಂಪುರ, ಕುಮಾರ ಮಜ್ಜಿಗೆ, ಮೈನುದ್ದಿನ್ ಕಾಶಿಮನವರ, ಶರೀ ಬಗಡಗೆರೆ ಇತರರು ಸಭೆಯಲ್ಲಿದ್ದರು.
ಅಹಿಂದ ನಾಯಕ ಸಿದ್ದರಾಮಯ್ಯ ಅವರ ಜನ್ಮದಿನವನ್ನು ಆಚರಿಸಲಾಯಿತು.