ಜಿಲ್ಲೆ

ಮೇಲ್‌ಗಂಗೊಳ್ಳಿಯಲ್ಲಿ ಜನಜಾಗೃತಿ ಆಂದೋಲನ

Dakshina Kannada

ಗಂಗೊಳ್ಳಿ: ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಶನ್ ಸೊಸೈಟಿ ಬೆಂಗಳೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಉಡುಪಿ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ ಉಡುಪಿ ಆಶ್ರಯದಲ್ಲಿ ಗಂಗೊಳ್ಳಿ ಗ್ರಾಮ ಪಂಚಾಯಿತಿ ಸಹಯೋಗದೊಂದಿಗೆ ಜಾನಪದ ಕಲಾ ತಂಡಗಳ ಮೂಲಕ ಎಚ್‌ಐವಿ-ಏಡ್ಸ್ ಕುರಿತು ಜನಜಾಗೃತಿ ಆಂದೋಲನ ಮೇಲ್‌ಗಂಗೊಳ್ಳಿ ಡಾ.ಅಂಬೇಡ್ಕರ್ ಸಭಾಭವನದಲ್ಲಿ ಭಾನುವಾರ ನಡೆಯಿತು.

ಗಂಗೊಳ್ಳಿ ಗ್ರಾಪಂ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶ್ರೀ ರೇಣುಕಾಮಾತೆ ತೊಗಲುಗೊಂಬೆ ಮೇಳ, ಅಂಬಳೆ, ಚಿಕ್ಕಮಗಳೂರು ಕಲಾ ತಂಡದಿಂದ ಎಚ್‌ಐವಿ-ಏಡ್ಸ್ ನಿಯಂತ್ರಣ ಕುರಿತಾದ ತೊಗಲುಗೊಂಬೆ ಪ್ರದರ್ಶನ ನಡೆಯಿತು. ಗಂಗೊಳ್ಳಿ ಗ್ರಾಪಂ ಸದಸ್ಯ ಬಿ.ರಾಘವೇಂದ್ರ ಪೈ, ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ಸಹಾಯಕಿ ಶ್ರೀದೇವಿ, ಆಶಾ ಕಾರ್ಯಕರ್ತೆಯರು, ಸ್ಥಳೀಯ ಯುವಕ, ಯುವತಿ ಮಂಡಲದ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು. ಗ್ರಾಪಂ ಸಿಬ್ಬಂದಿ ನಾರಾಯಣ ಶ್ಯಾನುಭಾಗ್ ವಂದಿಸಿದರು.