ಜಿಲ್ಲೆ

ತುಮಕೂರಿನಲ್ಲಿ ಸೆ.1 ರಿಂದ ಎಐಡಿಎಸ್‌ಒ ವಿದ್ಯಾರ್ಥಿ ಸಮ್ಮೇಳನ

ಸದೇಶ್ ಕಾರ್ಮಾಡ್

ಮೈಸೂರು: ತುಮಕೂರಿನಲ್ಲಿ ಸೆ.1 ರಿಂದ 3ರವರೆಗೆ ಎಐಡಿಎಸ್‌ಒ ಸಂಘಟನೆಯ 8ನೇ ವಿದ್ಯಾರ್ಥಿ ಸಮ್ಮೇಳನ ಹಮ್ಮಿಕೊಳ್ಳಲಾಗಿದ್ದು, 10 ಸಾವಿರ ವಿದ್ಯಾರ್ಥಿಗಳು ಪಾಲ್ಗೊಳ್ಳುತ್ತಿದ್ದಾರೆಂದು ಎಐಡಿಎಸ್‌ಒ ಜಿಲ್ಲಾಧ್ಯಕ್ಷ ಬಿ.ಜೆ ಸುಭಾಷ್ ತಿಳಿಸಿದರು.

ಎಲ್ಲ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ಒದಗಿಸಬೇಕು, ಸರ್ಕಾರಿ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಬೇಕು, ಪಠ್ಯಕ್ರಮದ ಮೂಲಕ ಶಿಕ್ಷಣ ಸಂಸ್ಥೆಗಳಲ್ಲಿ ಧರ್ಮ ನಿರಪೇಕ್ಷ ವಾತಾವರಣವನ್ನು ರಕ್ಷಿಸಬೇಕು, ವಿದ್ಯಾರ್ಥಿ ವೇತನ ಹಾಗೂ ಹಾಸ್ಟೆಲ್ ಸೌಲಭ್ಯಗಳನ್ನು ಖಾತ್ರಿಗೊಳಿಸಬೇಕು, ಎನ್‌ಇಪಿ ಹೇರಿಕೆಯನ್ನು ಕೈಬಿಡಬೇಕು ಎಂಬುದು ಸಮ್ಮೇಳನದ ಬೇಡಿಕೆಯಾಗಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರೂ ಶೈಕ್ಷಣಿಕ ವಲಯವನ್ನು ಅಭಿವೃದ್ಧಿಗೊಳಿಸಿ ಕಡೆಯ ಮಗುವಿಗೂ ಶಿಕ್ಷಣ ದಕ್ಕುವಂತೆ ಮಾಡುವುದು ಆದ್ಯತೆಯಾಗಿ ಉಳಿದಿಲ್ಲ. ಬದಲಿಗೆ, ಸರ್ಕಾರವು ತನ್ನ ಶೈಕ್ಷಣಿಕ ನೀತಿ, ನಿಲುವುಗಳ ಮೂಲಕ ಶಿಕ್ಷಣವನ್ನು ಮತ್ತಷ್ಟು ಖಾಸಗೀಕರಣಗೊಳಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಎಐಡಿಎಸ್‌ಒ ಪದಾಧಿಕಾರಿಗಳಾದ ಚಂದ್ರಕಲಾ, ನಿತಿನ್ ಹಾಗೂ ಪುಷ್ಪಾ ಇದ್ದರು.