ಜಿಲ್ಲೆ

ಎಐಡಿಎಸ್‌ಒಯುನಿಂದ ಭಗತ್ ಸಿಂಗ್ ಜನ್ಮದಿನಾಚರಣೆ

ಹಾಸನ: ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಎಐಡಿಎಸ್‌ಒಯು ನೇತೃತ್ವದಲ್ಲಿ ವಿದ್ಯಾರ್ಥಿಗಳು ಭಾನುವಾರ ಭಗತ್ ಸಿಂಗ್ ಅವರ ಜನ್ಮದಿನವನ್ನು ಆಚರಿಸಿದರು.

ಎಐಡಿಎಸ್‌ಒ ಜಿಲ್ಲಾ ಸಂಚಾಲಕಿ ಚೈತ್ರಾ ಮಾತನಾಡಿ, ಭಗತ್‌ಸಿಂಗ್ ತನ್ನ ಪ್ರಾಣವನ್ನು ಮುಡಿಪಾಗಿಟ್ಟು ಕ್ರಾಂತಿ ಮತ್ತು ಸ್ವಾತಂತ್ರೃಕ್ಕಾಗಿ ಹೋರಾಡಿದ್ದಾರೆ. ಉನ್ನತ ರಾಷ್ಟ್ರ ನಿರ್ಮಾಣ ಹಾಗೂ ಸಮಾನತೆ ದೊರಕಿಸಿಕೊಡುವ ಚಿಂತನೆ ಭಗತ್‌ಸಿಂಗ್ ಅವರದ್ದಾಗಿತ್ತು ಎಂದರು.

ಆಳುವವರು ಭಗತ್ ಸಿಂಗ್ ಅವರ ಚಿಂತನೆಗಳನ್ನು ಅರಿತುಕೊಳ್ಳಬೇಕಿದೆ. ಶಿಕ್ಷಣದ ವ್ಯಾಪಾರೀಕರಣ, ನಿರುದ್ಯೋಗ, ಹಸಿವು, ಬಡತನ, ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ಮುಂತಾದ ಸಮಸ್ಯೆಗಳನ್ನು ತಡೆಯಲು ಹಾಗೂ ಶಿಕ್ಷಣ-ಮಾನವತೆ-ಸಂಸ್ಕೃತಿ ಉಳಿಸಲು, ಅನ್ಯಾಯದ ವಿರುದ್ಧ ಧ್ವನಿ ಎತ್ತಲು ಭಗತ್ ಸಿಂಗ್ ಅವರ ವಿಚಾರಗಳಿಂದ ಸ್ಫೂರ್ತಿ ಪಡೆಯಬೇಕಿದೆ ಎಂದರು.

ರಾಜ್ಯ ಉಪಾಧ್ಯಕ್ಷೆ ಚಂದ್ರಕಲಾ, ಕಾರ್ಯಕರ್ತರಾದ ಮಮತಾ, ಪುರುಷೋತ್ತಮ್, ತಿಲಕ್, ನಂದಶ್ರೀ, ಪಲ್ಲವಿ, ಅನನ್ಯಾ ಇತರರಿದ್ದರು.