AIIMS RAICHUR 
ಜಿಲ್ಲೆ

ಎಐಸಿಸಿ ಅಧ್ಯಕ್ಷರ ಭೇಟಿ ಮಾಡಿದ ಏಮ್ಸ್ ಸಮಿತಿ

Raichur - Reporter - Rachhai Swamy

ರಾಯಚೂರು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ರಾಯಚೂರು ಏಮ್ಸ್ ಹೋರಾಟ ಸಮಿತಿ ನಿಯೋಗ ಶುಕ್ರವಾರ ನವದೆಹಲಿಯಲ್ಲಿ ಭೇಟಿ ಮಾಡಿದರು.

ಈ ವೇಳೆ ರಾಯಚೂರು ಯಾದಗಿರಿ ಲೋಕಸಭಾ ಕ್ಷೇತ್ರದ ಸಂಸದರಾದ ಜಿ. ಕುಮಾರ ನಾಯಕರವರು ಭೇಟಿಯಾಗಿ ಮಹತ್ವಾಕಾಂಕ್ಷೆ ಜಿಲ್ಲೆಯಾದ ರಾಯಚೂರಿಗೆ ಏಮ್ಸ್ ಆಸ್ಪತ್ರೆಯನ್ನು ಮಂಜೂರು ಮಾಡಲು ಹಿಂದೆಟು ಹಾಕುತ್ತಿರುವ ಪ್ರಧಾನ ಮಂತ್ರಿಗಳಿಗೆ ಹಾಗೂ ಆರೋಗ್ಯ ಸಚಿವರಿಗೆ ಈ ವಿಷಯದ ಬಗ್ಗೆ ಚರ್ಚಿಸಿ, ಈ ಭಾಗದ ಜನರ ಆರೋಗ್ಯದ ಸ್ಥಿತಿಗತಿಗಳ ಬಗ್ಗೆ ಅವರಿಗೆ ಮನವರಿಕೆ ಮಾಡುವಂತೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಹೋರಾಟ ಸಮಿತಿ ಸಂಚಾಲಕರಾದ ಡಾ,ಬಸವರಾಜ ಕಳಸ, ಕೆ.ಇ.ಕುಮಾರ್, ಉದಯ ಕುಮಾರ ಸಾಹುಕಾರ್ ಸೇರಿದಂತೆ ಅನೇಕರು ಇದ್ದರು.