ಮೈಸೂರು: ಉನ್ನತ ಶಿಕ್ಷಣ ಪಡೆಯುವುದು ವಿದ್ಯಾರ್ಥಿಗಳ ಗುರಿಯಾಗಬೇಕು. ಒಂದು ವರ್ಷದಲ್ಲಿ ನಾನೇನು ಸಾಧನೆ ಮಾಡಬೇಕು, ಎಷ್ಟು ಕಲಿಯಬೇಕು ಎಂಬುದರ ಬಗ್ಗೆಯೇ ಸದಾ ಯೋಚಿಸಿ ಕಾರ್ಯೋನ್ಮುಖರಾಗಬೇಕು ಎಂದು ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಕಿವಿಮಾತು ಹೇಳಿದರು.
ಮಾನಸಗಂಗೋತ್ರಿಯ ಲಲಿತಕಲಾ ಕಾಲೇಜಿನ ಸಭಾಂಗಣದಲ್ಲಿ ವಾಣಿಜ್ಯ ಅಧ್ಯಯನ ವಿಭಾಗದಿಂದ ಗುರುವಾರ ಆಯೋಜಿಸಿದ್ದ ಮಾನಸವೃದ್ಧಿ ವಾಣಿಜ್ಯ ಉತ್ಸವ ಉದ್ಘಾಟಿಸಿ ಅವರು ಮಾತನಾಡಿದರು.
ಉದ್ಯಮಶೀಲರಾಗಲು ವಿದ್ಯಾರ್ಥಿಗಳು ಆಲೋಚಿಸಬೇಕು. ಉದ್ಯೋಗ ಸೃಷ್ಟಿಸಿ ದೇಶದ ಅಭಿವೃದ್ಧಿಗೆ ನೆರವಾಗಬೇಕು. ಅದಕ್ಕಾಗಿ ತಂತ್ರಜ್ಞಾನ ಹಾಗೂ ಮಾನವ ಸಂಪನ್ಮೂಲವನ್ನು ಸರಿಯಾಗಿ ಬಳಸಿಕೊಳ್ಳಬೇಕು ಎಂದರು.