ಜಿಲ್ಲೆ

ವದ್ಧಿಕೆರೆ ಸಿದ್ದೇಶ್ವರ ಸ್ವಾಮಿಗೆ ವಿಶೇಷ ಪೂಜೆ

Chitradurga

ಐಮಂಗಲ: ಹೋಬಳಿಯ ಸುಕ್ಷೇತ್ರ ವದ್ಧಿಕೆರೆ ಗ್ರಾಮದ ಶ್ರೀ ಸಿದ್ದೇಶ್ವರ ಯಾನೆ ಕಾಲಬೈರವೇಶ್ವರ ಸ್ವಾಮಿ ದೇವಸ್ಥಾನದ ಬಾಗಿಲು ತೆರೆಯಲಾಯಿತು.

ಬೆಳಗ್ಗೆಯಿಂದಲೇ ಆಗಮಿಸಿದ ಭಕ್ತರು ದೇವರ ದರ್ಶನ ಪಡೆದು ಪುನೀತರಾದರು. ಸೋಮವಾರ ದೇವಸ್ಥಾನ ಬಾಗಿಲು ತೆರೆದ ಕಾರಣದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.

ದೇವಸ್ಥಾನದ ಬಾಗಿಲು ತೆರೆಯುವ ಹಿಂದಿನ ದಿನ (ಭಾನುವಾರ) ದೇವಸ್ಥಾನ ಮತ್ತು ಅದರ ಆವರಣ ಸ್ವಚ್ಛಗೊಳಿಸಲಾಯಿತು. ಜನರು ಸರತಿ ಸಾಲಿನಲ್ಲಿ ಪರಸ್ಪರ ಅಂತರ ಕಾಯ್ದುಕೊಂಡು ದೇವರ ದರ್ಶನ ಪಡೆದರು.