ಜಿಲ್ಲೆ

ಮೇ 22ರಂದು ವಿಮಾನ ದುರಂತ ಶ್ರದ್ಧಾಂಜಲಿ ಕಾರ್ಯಕ್ರಮ

Mangaluru - Hariprasad Rai



ಮಂಗಳೂರು : ಬಜ್ಪೆ ವಿಮಾನ ನಿಲ್ದಾಣದಲ್ಲಿ 2010ರ ಮೇ 22ರಂದು ನಡೆದ ಭೀಕರ ವಿಮಾನ ಅಪಘಾತ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾಡಳಿತ ಮಡಿದವರ ಆತ್ಮಕ್ಕೆ ಚಿರಶಾಂತಿ ಕೋರಿ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಪ್ರತೀ ವರ್ಷ ನಡೆಸುತ್ತಾ ಬಂದಿದೆ. ವಿಮಾನ ಅಪಘಾತದಲ್ಲಿ ಮರಣ ಹೊಂದಿದ 158 ಜನರ ನೆನಪಿಗಾಗಿ ಕೂಳೂರು ತಣ್ಣೀರು ಬಾವಿ ರಸ್ತೆಯಲ್ಲಿ ಪಾರ್ಕ್ ನಿರ್ಮಾಣ ಮಾಡಲಾಗಿದೆ. ಈ ವರ್ಷದ ಶ್ರದ್ಧಾಂಜಲಿ ಕಾರ್ಯಕ್ರಮ ಮೇ 22 ರಂದು ಬೆಳಗ್ಗೆ 9.30ಕ್ಕೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
..............................