ಜಿಲ್ಲೆ

ವಿಮಾನ ನಿಲ್ದಾಣ ಉದ್ಘಾಟನಾ ಸಮಾರಂಭಕ್ಕೆ ಬಂದಿದ್ದವ ಸಾವು

Shivamogga

ಶಿವಮೊಗ್ಗ: ವಿಮಾನ ನಿಲ್ದಾಣ ಉದ್ಘಾಟನಾ ಸಮಾರಂಭಕ್ಕೆ ಬಂದಿದ್ದ ವ್ಯಕ್ತಿಯೊಬ್ಬರು ಸೋಮವಾರ ಮಧ್ಯಾಹ್ನ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಸೊರಬ ತಾಲೂಕಿನ ಚಿಮನೂರಿನ ಮಲ್ಲಿಕಾರ್ಜುನಪ್ಪ (58) ಮೃತರು. ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮಕ್ಕೆ ಸ್ವಗ್ರಾಮದಿಂದ ಬಸ್‌ನಲ್ಲಿ ಆಗಮಿಸಿದ್ದರು. ಬಾಯಾರಿಕೆಯಿಂದ ನೀರು ಕುಡಿದ ಸ್ವಲ್ಪ ಹೊತ್ತಿನಲ್ಲೇ ಕುಸಿದು ಬಿದ್ದಿದ್ದರು.

ತಕ್ಷಣವೇ ಅವರನ್ನು ಆಂಬುಲೆನ್ಸ್‌ನಲ್ಲಿ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಆಸ್ಪತ್ರೆಗೆ ಸಾಗಿಸುವ ಮುನ್ನವೇ ಮೃತಪಟ್ಟಿದ್ದಾರೆ. ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.