ದೇವನಹಳ್ಳಿ ತಾಪಂ ಆವರಣದಲ್ಲಿ ಅಕ್ಕಕೆೆಗೆ ಸಚಿವ ಶರಣ್ ಪ್ರಕಾಶ್ ಪಾಟೀಲ್ ಹಾಗೂ ಕೆ.ಎಚ್.ಮುನಿಯಪ್ಪ ಚಾಲನೆ ನೀಡಿದರು. ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರ ಅಧ್ಯಕ್ಷ ಶಾಂತಕುಮಾರ್, ತಾಲೂಕು ಅಧ್ಯಕ್ಷ ಜಗನ್ನಾಥ, ಕೌಶಲಾಭಿವೃದ್ಧಿ ಇಲಾಖೆ ಆಯುಕ್ತೆ ಉಮಾ ಮಹದೇವನ್, ರಾಷ್ಟ್ರೀಯ ಜೀವನೋಪಾಯ ಅಭಿಯಾನ ನಿರ್ದೇಶಕಿ ಪಿ.ವಿದ್ಯಾ, ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಇದ್ದರು. 
ಜಿಲ್ಲೆ

ಮಹಿಳಾ ಸ್ವಾವಲಂಬನೆಗೆ ಅಕ್ಕ

ಶಿವರಾಜ.ಎಂ

ಸಚಿವ ಶರಣ ಪ್ರಕಾಶ ಪಾಟೀಲ್ ಅಭಿಮತ

ದೇವನಹಳ್ಳಿ ತಾಪಂ ಆವರಣದಲ್ಲಿ ಚಾಲನೆ


ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಮಹಿಳಾ ಸಬಲೀಕರಣವನ್ನು ಉತ್ತೇಜಿಸಲು ಹಾಗೂ ಮಹಿಳೆಯರ ಸ್ವಾವಲಂಬಿ ಬದುಕಿಗೆ ಉತ್ತೇಜನ ನೀಡಲು ಅಕ್ಕ ಕೆೆ ಸಹಕಾರಿಯಾಗಲಿದೆ ಎಂದು ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಸಚಿವ ಶರಣ ಪ್ರಕಾಶ್ ರುದ್ರಪ್ಪ ಪಾಟೀಲ್ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ವತಿಯಿಂದ ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿ ದೇವನಹಳ್ಳಿ ತಾಲೂಕು ಪಂಚಾಯಿತಿ ಆವರಣದಲ್ಲಿ ಮಂಗಳವಾರ ಅಕ್ಕ ಬೇಕರಿ-ಕೆಫೆ ಉದ್ಘಾಟಿಸಿ ಮಾತನಾಡಿದರು. ಮಹಿಳೆಯರ ಹಿತದೃಷ್ಟಿಯಿಂದ ರಾಜ್ಯ ಸರ್ಕಾ ಈ ಯೋಜನೆ ಆರಂಭಿಸಿದೆ, ಮಹಿಳಾ ಸಬಲೀಕರಣದತ್ತ ಮಹತ್ವದ ಹೆಜ್ಜೆಯನ್ನಿಟ್ಟು ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್, ಕರ್ನಾಟಕ ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ಮೊದಲ ಅಕ್ಕ ಕೆಫೆಯನ್ನು ಬೆಂಗಳೂರಿನಲ್ಲಿ ಪ್ರಾರಂಭಿಸಲಾಗಿದ್ದು, ದೇವನಹಳ್ಳಿಯಲ್ಲಿ ಎರಡನೇಯದು ಇದಾಗಿದೆ, ರಾಜ್ಯಾದ್ಯಂತ 50 ಅಕ್ಕ ಕೆಫೆ ತೆರೆಯಲಾಗುವುದು ಎಂದು ಮಾಹಿತಿ ನೀಡಿದರು. ಹಾಗೇಯೇ ಮಹಿಳೆಯರ ಸಬಲೀಕರಣಕ್ಕೆ ರಾಜ್ಯಾದ್ಯಂತ 2500ಕಾಫಿ ಕೆಫೆ ಸ್ಥಾಪನೆ ಮಾಡುವ ಉದ್ದೇಶವಿದೆ. 3500 ಮಹಿಳೆಯರು ತರಬೇತಿ ಪಡೆದು ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಕೆಲಸ ಮಾಡುತ್ತಿದ್ದಾರೆ. ಮಹಿಳೆಯರ ಸಬಲೀಕರಣ ದೃಷ್ಟಿಯಿಂದ ಗ್ಯಾರಂಟಿ ಯೋಜನೆಗಳ ಜತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳು ಜಾರಿಗೆ ತಂದಿದ್ದೇವೆ ಎಂದರು. ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಮತ್ತು ಉದ್ಯಮಶೀಲತೆಗೆ ಆದ್ಯತೆ ನೀಡಲಿದೆ. ಕರ್ನಾಟಕದ ಸಾಮಾಜಿಕ-ಆರ್ಥಿಕ ಕ್ಷೇತ್ರದ ಮೇಲೆ ಇದು ಉತ್ತಮ ಪರಿಣಾಮ ಬೀರಲಿದೆ ಎಂದರು..ಶಾಶ್ವತವಾದ ಪರಿಣಾಮವನ್ನು ಬೀರುತ್ತದೆ ಎಂದು ಸಚಿವರು ಹೇಳಿದರು. 2024-25ರ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಚಯಿಸಿದ ಅಕ್ಕ ಕೆಫೆಯು ಮಹಿಳೆಯರಿಗೆ ಸುಸ್ಥಿರ ಜೀವನೋಪಾಯ ಸೃಷ್ಟಿಸುವ ಗುರಿ ಹೊಂದಿದೆ. ಇದು ನಿರ್ದಿಷ್ಟವಾಗಿ ಮಹಿಳಾ ಉದ್ಯಮಿಗಳನ್ನು ಬೆಂಬಲಿಸುತ್ತದೆ, ವಿಶೇಷವಾಗಿ ಸ್ವ-ಸಹಾಯ ಗುಂಪುಗಳಿಂದ ಅವರಿಗೆ ಅತ್ಯಾಧುನಿಕ ಕೆಫೆಗಳನ್ನು ನಿರ್ವಹಿಸಲು ಅವಕಾಶಗಳನ್ನು ನೀಡಲಿದೆ ಎಂದರು.
12 ತಂಡ: ಸ್ವಸಹಾಯ ಗುಂಪಿನ 12 ಮಹಿಳೆಯರ ತಂಡ ಈ ಕೆೆ ನಡೆಸುತ್ತದೆ. ಅಕ್ಕ ಕೆಫೆ ಬೆಳಗ್ಗೆ 9 ರಿಂದ ರಾತ್ರಿ 9 ರ ವರೆಗೆ ವಾರವಿಡಿ ಕಾರ್ಯನಿರ್ಹಿಸಲಿದೆ. ಇಲ್ಲಿ ಆರೋಗ್ಯಕರ ಹಾಗೂ ಸ್ವಾದಿಷ್ಟಕರ ಆಹಾರ ಲಭ್ಯವಿದ್ದು, ಶುಚಿ-ರುಚಿ ಜತೆಗೆ ಕೈಗೆಟಕುವ ದರದಲ್ಲಿ ಗ್ರಾಹಕರಿಗೆ ಆಹಾರ ಪೂರೈಸಲಾಗುತ್ತದೆ.
ಸರ್ಕಾರ ಬಜೆಟ್‌ನಲ್ಲಿ ಘೋಷಣೆ ಮಾಡಿದಂತೆ ಅಕ್ಕ ಕೆಫೆ ಯೋಜನೆ ಕಾರ್ಯರೂಪಕ್ಕೆ ಬಂದಿದೆ ಎಂದು ಸಚಿವರು ತಿಳಿಸಿದರು.
ಮಹಿಳೆಯರಿಗಾಗಿ ಕಾರ್ಯಕ್ರಮ:
ಸ್ವಸಹಾಯ ಗುಂಪುಗಳ ಮೂಲಕ ಮಹಿಳೆಯರನ್ನು ಬಲಗೊಳಿಸಲು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು. ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಮಹಿಳೆಯರು ಸದುಪಯೋಗಪಡಿಸಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಬೇಕು. ಅಕ್ಕ ಕೆಫೆಯುಉತ್ತಮ ವೇದಿಕೆಯಾಗಿದ್ದು ಮಹಿಳೆಯರ ಸ್ವಾವಲಂಬಿ ಬದುಕಿಗೆ ಸಹಕಾರಿಯಾಗಲಿದೆ ಎಂದರು.