ಜಿಲ್ಲೆ

ಅಕ್ಷರ ದಾಸೋಹ ಕಾರ್ಮಿಕರ ಪ್ರತಿಭಟನೆ

ಅವಿನಾಶ್ ಜೈನಹಳ್ಳಿ

ಮೈಸೂರು: ಗ್ರಾಮೀಣ ಪ್ರದೇಶದಲ್ಲಿರುವ ಶಾಲೆಗಳಿಗೆ ಇಸ್ಕಾನ್ ಅಕ್ಷಯ ಪಾತ್ರೆ ಮೂಲಕ ಬಿಸಿಯೂಟ ವಿತರಿಸುವುದನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು.
ಕಳೆದ 20-22 ವರ್ಷಗಳಿಂದ ಅಕ್ಷರ ದಾಸೋಹ ಯೋಜನೆಯಡಿ ಕೆಲಸ ಮಾಡುತ್ತಿರುವ, ಆರ್ಥಿಕವಾಗಿ ಹಿಂದುಳಿದಿರುವ ಬಡ ಹೆಣ್ಣು ಮಕ್ಕಳು ತಾವು ಕೆಲಸ ಮಾಡುತ್ತಿದ್ದ ಶಾಲೆ ಇಸ್ಕಾನ್ ಅಕ್ಷಯ ಪಾತ್ರೆ ಯೋಜನೆಗೆ ಒಳಪಡುತ್ತಿದ್ದಂತೆ ಕೆಲಸದಿಂದ ವಂಚಿತರಾಗುತ್ತಾರೆ. ಹೀಗಾಗಿ ಬಡ ಹೆಣ್ಣು ಮಕ್ಕಳ ಹೊಟ್ಟೆಗೆ ಹೊಡೆಯದೆ ಎನ್‌ಜಿಒಗಳಿಗೆ ಬಿಸಿಯೂಟ ತಯಾರಿಕೆಯ ಕರಾರನ್ನು ನೀಡಬಾರದು ಎಂದು ಆಗ್ರಹಿಸಿದರು.