ಅಳವಂಡಿ: ಸಮೀಪದ ಘಟ್ಟಿರಡ್ಡಿಹಾಳ ಗ್ರಾಮದಲ್ಲಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಪುರಾಣ ಮಂಗಲ ಕಾರ್ಯಕ್ರಮ ಅಂಗವಾಗಿ ಗುರುವಾರ ಮಹಿಳೆಯರ ಕುಂಭದೊಂದಿಗೆ ಅಡ್ಡಪಲ್ಲಕ್ಕಿ ಮೆರವಣಿಗೆ ಅದ್ದೂರಿಯಾಗಿ ಜರುಗಿತು. ಬೆಳಗ್ಗೆ ಗ್ರಾಮ ಹೊರವಲಯದ ಹಿರೇಹಳ್ಳದಲ್ಲಿ ಗಂಗಾಪೂಜೆ ನೆರವೇರಿಸಲಾಯಿತು.
ಇದನ್ನೂ ಓದಿ: ಉಭಯ ಜಗದ್ಗುರುಗಳ ಅಡ್ಡಪಲ್ಲಕ್ಕಿ ಉತ್ಸವ ವೈಭವ
ಕುಂಭಗಳನ್ನು ಹೊತ್ತ ಮಹಿಳೆಯರು ದೇವಸ್ಥಾನಕ್ಕೆ ಮೆರವಣಿಗೆ ಮೂಲಕ ತೆರಳಿದರು. ನಂತರ ಹೂಗಳಿಂದ ಅಲಂಕರಿಸಿದ ಅಡ್ಡಪಲ್ಲಕ್ಕಿಯಲ್ಲಿ ಮಲ್ಲಮ್ಮ ತಾಯಿ ಮೂರ್ತಿ ಹಾಗೂ ವೇಮನ ಭಾವಚಿತ್ರವನ್ನಿರಿಸಿ ಪ್ರಮುಖ ಬೀದಿಗಳಲ್ಲಿ ಮಹಿಳೆಯರ ಕಳಸ, ಕುಂಭ ಹಾಗೂ ಡೊಳ್ಳ-ಭಜನೆ ಇತರ ವಾದ್ಯ ಮೇಳದೊಂದಿಗೆ ಮೆರವಣಿಗೆ ಜರುಗಿತು. ನಂತರ ಅನ್ನ ಸಂತರ್ಪಣೆ ನಡೆಯಿತು.