ಅರಕೇರಾ ತಾಲೂಕಿನ ಆಲ್ಕೋಡ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಪ್ರಾರಂಭಿಸಲು ಡಿಎಚ್‌ಒ ಡಾ.ಸುರೇಂದ್ರ ಬಾಬುಗೆ ಗ್ರಾಪಂ ಅಧ್ಯಕ್ಷ ಮಹೇಶ ನಾಯಕ ಮನವಿ ಸಲ್ಲಿಸಿದರು. 
ಜಿಲ್ಲೆ

ಆಲ್ಕೋಡಕ್ಕೆ ಆರೋಗ್ಯ ಸೇವೆ ಒದಗಿಸಿ

Kopala - Desk - Eraveni

ಅರಕೇರಾ: ತಾಲೂಕಿನ ಆಲ್ಕೋಡ ಗ್ರಾಮಕ್ಕೆ ಮಂಜೂರಾಗಿರುವ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಪ್ರಾರಂಭಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಡಿಎಚ್‌ಒ ಡಾ.ಸುರೇಂದ್ರ ಬಾಬುಗೆ ಗ್ರಾಪಂ ಅಧ್ಯಕ್ಷ ಮಹೇಶ ನಾಯಕ ಸೋಮವಾರ ಮನವಿ ಸಲ್ಲಿಸಿದರು

ನಂತರ ಮಾತನಾಡಿ, ಆಲ್ಕೋಡ, ಗಲಗ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಗೆ ಒಳಪಡುತ್ತದೆ. ಇದು ಸುಮಾರು 15ಕಿ.ಮೀ. ದೂರವಿದ್ದು, ಇಲ್ಲಿನ ಸಾರ್ವಜನಿಕರು ಗಲಗ ಅಥವಾ ಅರಕೇರಾ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯಬೇಕು. ಅದರೆ, ಸಾರಿಗೆ ವ್ಯವಸ್ಥೆ ಸರಿಯಿಲ್ಲಾದ ಕಾರಣ ಈ ಭಾಗದ ಜನರಿಗೆ ಆರೋಗ್ಯ ಸೇವೆ ಪಡೆಯಲು ಸಾಧ್ಯವಾಗುತ್ತಿಲ್ಲ ಎಂದರು.

ಸರ್ಕಾರದ ನಿಯಮದ ಪ್ರಕಾರ 10ಸಾವಿರ ಜನಸಂಖ್ಯೆ ವ್ಯಾಪ್ತಿಗೆ ಒಂದು ಪ್ರಾಥಮಿಕ ಆರೋಗ್ಯ ಕೇಂದ್ರ, ಐದು ಸಾವಿರ ಜನಸಂಖ್ಯೆಗೆ ಒಂದು ಉಪಕೇಂದ್ರ ಇರಬೇಕು. ಅದರೆ, ಗಲಗ ಪ್ರಾಥಮಿಕ ಆರೋಗ್ಯ ಕೇಂದ್ರ 70ಸಾವಿರ ಜನಸಂಖ್ಯೆ ವ್ಯಾಪ್ತಿ ಹೊಂದಿದೆ.

ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ಆಲ್ಕೋಡ ಗ್ರಾಮಕ್ಕೆ ಮಂಜೂರಾಗಿರುವ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಒಂದು ತಿಂಗಳೊಳಗೆ ತಾತ್ಕಾಲಿಕವಾಗಿ ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ ಪ್ರಾರಂಭಿಸಿ, ಅಲ್ಲಿಗೆ ಅಗತ್ಯ ವೈದ್ಯರು, ಸಿಬ್ಬಂದಿ ನೇಮಕ ಮಾಡಿ ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ನೀಡಬೇಕು ಎಂದು ಮಹೇಶ ನಾಯಕ ಒತ್ತಾಯಿಸಿದ್ದಾರೆ.