ಶಿಗ್ಗಾಂವಿ: ಮದ್ಯ ಸೇವಿಸಿದ ಅಮಲಿನಲ್ಲಿ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಶಿಶುವಿನಹಾಳ ಗ್ರಾಮದಲ್ಲಿ ಭಾನುವಾರ ನಡೆದಿದೆ.
ಗ್ರಾಮದ ಮಂಜುನಾಥ ಚನ್ನಬಸಪ್ಪ ಹುಣಸಿಹುಳಿ (32) ಮೃತ ವ್ಯಕ್ತಿ.
ಈತ ಮದ್ಯ ಸೇವಿಸುವ ಚಟಕ್ಕೆ ಅಂಟಿಕೊಂಡಿದ್ದ. ಇದರಿಂದ ಮದ್ಯ ಸೇವಿಸಿದ ಅಮಲಿನಲ್ಲಿ ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಹುಲಗೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.