ಜಿಲ್ಲೆ

ಮದ್ಯ ಸೇವನೆಯಿಂದ ವಿಷ ಸೇವಿಸಿ ಸಾವು

Haveri - Kariyappa Aralikatti

ರಟ್ಟಿಹಳ್ಳಿ: ಮದ್ಯ ಸೇವನೆ ಚಟಕ್ಕೆ ಅಂಟಿಕೊಂಡ ವ್ಯಕ್ತಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಲಿಂಗರಟ್ಟಿ ಗ್ರಾಮದಲ್ಲಿ ನಡೆದಿದೆ.
ವಿನಾಯಕ ಚೆನ್ನಪ್ಪ ಹುಗ್ಗೇರ (27) ಮೃತ ವ್ಯಕ್ತಿ.
ಈತ ಮದ್ಯ ಸೇವನೆ ಚಟಕ್ಕೆ ಅಂಟಿಕೊಂಡಿದ್ದ. ಮದ್ಯ ಸೇವನೆ ಮಾಡಿದ ಅಮಲಿನಲ್ಲಿ ವಿಷ ಸೇವಿಸಿ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ರಟ್ಟಿಹಳ್ಳಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.