ಜಿಲ್ಲೆ

ಮದ್ಯ ವ್ಯಸನದಿಂದ ಭವಿಷ್ಯ ಹಾಳು : ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿಕೆ

ಸೌಮ್ಯ ಆರ್

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ

ಮದ್ಯಪಾನ ಕೆಟ್ಟದ್ದು ಎನ್ನುವುದು ಗೊತ್ತಿದೆ. ಆದರೆ ಒಮ್ಮೆ ಕುಡಿತಕ್ಕೆ ದಾಸನಾದರೆ ವ್ಯಸನಿಯನ್ನು ಮದ್ಯ ಬಿಡುವುದಿಲ್ಲ. ವ್ಯಕ್ತಿಯ ಗುಣ, ನಡತೆ, ಸ್ವಭಾವ, ಆಲೋಚನೆ ಒಟ್ಟಿನಲ್ಲಿ ಭವಿಷ್ಯವನ್ನೇ ಹಾಳು ಮಾಡುವ ವಸ್ತು ಎಂದರೆ ಅದು ಮಾದಕ ವಸ್ತು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.

ಉಜಿರೆ ಲಾಯಿಲದಲ್ಲಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ, ಸಂಶೋಧನಾ ಕೇಂದ್ರದಲ್ಲಿ ನಡೆದ 242ನೇ ವಿಶೇಷ ಮದ್ಯವರ್ಜನ ಶಿಬಿರದ ಶಿಬಿರಾರ್ಥಿಗಳನ್ನು ಕುರಿತು ಮಾತನಾಡಿದರು.

ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟಿ ಡಾ.ಹರೀಶ್ ಕೃಷ್ಣಸ್ವಾಮಿ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್ ಎಸ್.ಎಸ್. ಮಾತನಾಡಿದರು.

8 ದಿನದ ಶಿಬಿರದಲ್ಲಿ ರಾಜ್ಯಾದ್ಯಂತ 73 ಶಿಬಿರಾರ್ಥಿಗಳು ಭಾಗವಹಿಸಿದ್ದರು. ಶಿಬಿರದ ಕುಟುಂಬ ದಿನ ಕಾರ್ಯಕ್ರಮವನ್ನು ಜನಜಾಗೃತಿ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿ.ಪಾಸ್ ನಡೆಸಿಕೊಟ್ಟರು. ಯೋಜನಾಧಿಕಾರಿ ಮಾಧವಗೌಡ, ಶಿಬಿರಾಧಿಕಾರಿಗಳಾದ ನಂದಕುಮಾರ್, ರಮೇಶ್, ಆರೋಗ್ಯ ಸಹಾಯಕ ವೆಂಕಟೇಶ್, ಆಪ್ತ ಸಲಹೆಗಾರ ಜಿ.ಆರ್.ಮಧು ಸಹಕರಿಸಿದರು. ಮುಂದಿನ ವಿಶೇಷ ಶಿಬಿರ ಮಾ.3ರಂದು ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.