ಜಿಲ್ಲೆ

ಮನಃಪರಿವರ್ತನೆಯಿಂದ ದುಶ್ಚಟ ದೂರ: ಡಾ.ಡಿ.ವೀರೇಂದ್ರ ಹೆಗ್ಗಡೆ ಅಭಿಮತ

ಸೌಮ್ಯ ಆರ್

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ

ಕೆಟ್ಟ ಅಭ್ಯಾಸಗಳು ಮನುಷ್ಯನನ್ನು ಸುಲಭವಾಗಿ ಅಂಟಿಕೊಳ್ಳುತ್ತದೆ. ಆದರೆ ಅದನ್ನು ಬಿಡಲು ಕಷ್ಟ ಪಡಬೇಕಾಗುತ್ತದೆ. ದೃಢಸಂಕಲ್ಪ ಮತ್ತು ಮನಃಪರಿವರ್ತನೆಯಿಂದ ದುಶ್ಚಟ ದೂರ ಮಾಡಲು ಸಾಧ್ಯ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.

ಉಜಿರೆ ಲಾಲದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರದಲ್ಲಿ 249ನೇ ವಿಶೇಷ ಮದ್ಯವರ್ಜನ ಶಿಬಿರದ ಶಿಬಿರಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಮದ್ಯವರ್ಜನ ಶಿಬಿರದ ಮೂಲಕ ಶಿಬಿರಾರ್ಥಿಗಳಿಗೆ ಪ್ರೇರಣೆ ಕೊಟ್ಟು ಮನಃಪರಿವರ್ತನೆ ಮಾಡಲಾಗುತ್ತಿದೆ ಎಂದರು.

ಡಾ.ಹೆಗ್ಗಡೆಯವರ ಕಚೇರಿ ಪ್ರಬಂಧಕ ರಾಜೇಂದ್ರ ದಾಸ್ ಉಪಸ್ಥಿತರಿದ್ದರು. ಜನಜಾಗೃತಿ ವೇದಿಕೆ ಕಾರ್ಯದರ್ಶಿಗಳಾದ ವಿವೇಕ್ ವಿ.ಪಾಯ್ಸ, ಆಡಳಿತ ಯೋಜನಾಧಿಕಾರಿಗಳಾದ ಮಾಧವ ಗೌಡ, ಶಿಬಿರಾಧಿಕಾರಿ ವಿದ್ಯಾಧರ್, ರಮೇಶ್, ಜಯಾನಂದ, ಆರೋಗ್ಯ ಸಹಾಯಕಿ ಫಿಲೋಮಿನಾ ಡಿಸೋಜ, ಶಿಬಿರದ ಆಪ್ತ ಸಲಹೆಗಾರ ಮಧು ಜಿ.ಆರ್. ಹಾಗೂ ಜಾಗೃತಿ ಸೌಧದ ಪ್ರಬಂಧಕ ಕಿಶೋರ್ ಕುಮಾರ್ ಸಹಕರಿಸಿದರು. ರಾಜ್ಯದ ವಿವಿಧ ಕಡೆಗಳಿಂದ 57 ಮಂದಿ ಶಿಬಿರಾರ್ಥಿಗಳು ಭಾಗವಹಿಸಿದ್ದರು.