ಮೈಸೂರು: ಬೆಂಗಳೂರು ನಗರದಲ್ಲಿ ಬಡವರು, ಶ್ರೀಮಂತರು ಎನ್ನದೆ ಎಲ್ಲರು ಮಾಡಿರುವ ಒತ್ತುವರಿಯನ್ನು ತೆರವುಗೊಳಿಸಲಾಗುತ್ತಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದರು.
ನಗರದಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಬೆಂಗಳೂರಿನ ಎರಡು ವಲಯದಲ್ಲಿ ಒತ್ತುವರಿ ತೆರವು ಕಾರ್ಯ ನಡೆಯುತ್ತಿದೆ. ಮುಂಬರುವ ದಿನಗಳಲ್ಲಿ ಬೆಂಗಳೂರಿನೆಲ್ಲೆಡೆ ಒತ್ತುವರಿ ತೆರವು ಕಾರ್ಯ ಮಾಡಲಾಗುವುದು ಎಂದು ಹೇಳಿದರು.
ಬಡವರು ಮಾಡಿರುವ ಒತ್ತುವರಿ ತೆರವು ಮಾಡಲು ಮಾಧ್ಯಮದವರು ಬಿಡುತ್ತಿಲ್ಲ. ಶ್ರೀಮಂತರು ಮಾಡಿರುವ ಒತ್ತುವರಿ ತೆರವಿಗೆ ಕಾಂಗ್ರೆಸ್‌ನವರು ಬಿಡುತ್ತಿಲ್ಲ. ಆದರೆ ಬಡವರು ಶ್ರೀಮಂತರು ಎನ್ನದೆ ಎಲ್ಲ ಒತ್ತುವರಿ ತೆರವು ಮಾಡಲಾಗುವುದು. ಬಡವರಿಗೆ ನೆರವು ನೀಡುವ ಕುರಿತು ಮುಖ್ಯಮಂತ್ರಿ ಜತೆ ಚರ್ಚಿಸಲಾಗುವುದು ಎಂದು ಹೇಳಿದರು.