ಜಿಲ್ಲೆ

ಶಾಂತಿಯುತ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಕಲ ಸಿದ್ಧತೆ

ರಾಘವೇಂದ್ರಗೌಡ ಭೀ ಪಾಟೀಲ್

ಸವದತ್ತಿ: ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಮಾ.21ರಿಂದ ಏ.4ರ ವರೆಗೆ ನಡೆಯಲಿವೆ. ಶಾಂತಿಯುತ ಹಾಗೂ ಪಾರದರ್ಶಕವಾಗಿ ಪರೀಕ್ಷೆಗಾಗಿ ಅಗತ್ಯ ಸಿದ್ದತೆ ಕೈಗೊಳ್ಳಲಾಗಿದೆ ಎಂದು ಬಿಇಒ ಮೋಹನ ದಂಡಿನ ತಿಳಿಸಿದರು.

ಇಲ್ಲಿನ ತಹಸೀಲ್ದಾರ್ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷಾ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ತಾಲೂಕಿನಲ್ಲಿ ಒಟ್ಟು 19 ಪರೀಕ್ಷೆ ಕೇಂದ್ರ ಸ್ಥಾಪಿಸಲಾಗಿದೆ. ಒಟ್ಟು 5,379 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆೆ ಎಂದು ಮಾಹಿತಿ ನೀಡಿದರು.

ತಹಸೀಲ್ದಾರ್ ಮಲ್ಲಿಕಾರ್ಜುನ ಹೆಗ್ಗಣ್ಣವರ ಮಾತನಾಡಿ, ಕೇಂದ್ರಗಳಲ್ಲಿ ಪರೀಕ್ಷಾ ಸಿಬ್ಬಂದಿ ಮತ್ತು ಜಾಗೃತ ದಳ ಅಧಿಕಾರಿಗಳನ್ನು ಹೊರತುಪಡಿಸಿ ಬೇರೆಯವರಿಗೆ ಪ್ರವೇಶ ಇರುವುದಿಲ್ಲ. ವಿದ್ಯಾರ್ಥಿಗಳ ಅಭ್ಯಾಸಕ್ಕೆ ತೊಂದರೆಯಾಗದಂತೆ ವಿದ್ಯುತ್, ಸಾರಿಗೆ ವ್ಯವಸ್ಥೆ ಒದಗಿಸಲು ಅಧಿಕಾರಿಗಳಿಗೆ ಸೂಚಿಸಿದರು.

ತಹಸೀಲ್ದಾರ್ ಎಂ.ವಿ.ಗುಂಡಪ್ಪಗೋಳ, ಮುಖ್ಯಾಧಿಕಾರಿ ಸಂಗನಬಸಯ್ಯ ಗದಗಿಮಠ, ಪಿಐ ಧರ್ಮಾಕರ ಧರ್ಮಟ್ಟಿ, ಆರೋಗ್ಯಧಿಕಾರಿ ಶ್ರೀಪಾದ ಸಬನೀಸ, ಸಾರಿಗೆ ಘಟಕ ವ್ಯವಸ್ಥಾಪಕ ಬಿ.ಕೆ ನಾಗರಾಜ, ಸಿಡಿಪಿಒ ಸುನೀತಾ ಪಾಟೀಲ ಇತರರಿದ್ದರು.