ಮುಂಡರಗಿ: ಪಟ್ಟಣದ ಪುರಸಭೆ ಮೈದಾನದಲ್ಲಿ ಸೆ.15ರಂದು ಬೆಳಗ್ಗೆ 10 ಗಂಟೆಗೆ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಿಸಲಾಗುವುದು ಎಂದು ತಹಸೀಲ್ದಾರ್ ಧನಂಜಯ ಎಂ. ಹೇಳಿದರು.
ಪಟ್ಟಣದ ತಹಸೀಲ್ದಾರ್ ಕಾರ್ಯಾಲಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳ ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರಜಾಪ್ರಭುತ್ವ ದಿನಾಚರಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಪಟ್ಟಣ ಹಾಗೂ ತಾಲೂಕಿನ ಎಲ್ಲ ಸಂಘ, ಸಂಸ್ಥೆಗಳ ಪದಾಧಿಕಾರಿಗಳು, ಎಲ್ಲ ಇಲಾಖೆ ಅಧಿಕಾರಿಗಳು ಹಾಗೂ ಸಾರ್ವಜನಿಕರು ಸಮಾರಂಭದಲ್ಲಿ ಪಾಲ್ಗೊಳ್ಳಬೇಕು ಎಂದರು.
ತಾಲೂಕು ಸಮಾಜಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಉದಯಕುಮಾರ ಯಲಿವಾಳ ಮಾತನಾಡಿ, ಪಟ್ಟಣದ ವಿವಿಧ ಸಂಘ, ಸಂಸ್ಥೆಯ ಸರ್ವ ಪದಾಧಿಕಾರಿಗಳು, ಎಲ್ಲ ಇಲಾಖೆಗಳ ಸಿಬ್ಬಂದಿ ಹಾಗೂ ಸಾರ್ವಜನಿಕರು ಮುಕ್ತವಾಗಿ ಸಮಾರಂಭದಲ್ಲಿ ಪಾಲ್ಗೊಳ್ಳಬೇಕು. ಸಂವಿಧಾನ ನಮ್ಮೆಲ್ಲರಿಗೂ ಸಮಾನತೆಯನ್ನು ಬೋಧಿಸಿದ್ದು, ಅದರ ಆಶಯಗಳನ್ನು ನಾವೆಲ್ಲರೂ ಈಡೇರಿಸಬೇಕು ಎಂದರು.
ತಾ.ಪಂ. ಇಒ ವಿಶ್ವನಾಥ ಹೊಸಮನಿ, ಸಿಪಿಐ ಮಂಜುನಾಥ ಕುಸುಗಲ್ಲ, ಉಪ ತಹಸೀಲ್ದಾರ್ ಎಸ್.ಎಸ್. ಬಿಚ್ಚಾಲಿ, ಮೈಲಾರೆಪ್ಪ ಕಲಕೇರಿ, ಶಿವನಗೌಡ್ರ ಗೌಡ್ರ, ಲಕ್ಷ್ಮಣ ತಗಡಿನಮನಿ, ಸುರೇಶ ಹಲವಾಗಲಿ, ಮಂಜುನಾಥ ಮುಧೋಳ, ಸೋಮಣ್ಣ ಹೈತಾಪುರ, ಅಡಿವೆಪ್ಪ ಚಲವಾದಿ, ಉಮೇಶ ಹಿರೇಮಠ, ಸುರೇಶ ಮಾಗಡಿ, ಸುರೇಶ ಬಣಕಾರ ಇತರರು ಇದ್ದರು.