ವಿಜಯಪುರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಉಪನ್ಯಾಸಕರ ಅರ್ಹತಾ ಪರೀಕ್ಷೆಯ ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಮಾತನಾಡಿದರು. ಶಂಕರ ಮಾರಿಹಾಳ , ಹನಮಂತ ಕಾಲತಿಪ್ಪಿ, ಸಿ.ಕೆ. ಹೊಸಮನಿ ಮತ್ತಿತರರಿದ್ದಾರೆ. 
ಜಿಲ್ಲೆ

ನಾಳೆ ಕೆ-ಸೆಟ್​ ಪರೀಕ್ಷೆಗೆ ಸರ್ವ ಸಿದ್ಧತೆ

ವಿಜಯಪುರ: ಜಿಲ್ಲೆಯ 11 ಪರೀಕ್ಷಾಕೇಂದ್ರಗಳಲ್ಲಿ ನ. 24 ರಂದು ಕೆ&ಸೆಟ್​ ಪರೀೆಗಳು ನಡೆಯಲಿದ್ದು, ಪರೀಕ್ಷೆಗೆ ನಿಯೋಜಿಸಿದ ಅಧಿಕಾರಿ, ಸಿಬ್ಬಂದಿ ಕಟ್ಟುನಿಟ್ಟಾಗಿ ಕಾರ್ಯ ನಿರ್ವಹಿಸುವ ಮೂಲಕ ವ್ಯವಸ್ಥಿತವಾಗಿ ಹಾಗೂ ಸುಸೂತ್ರವಾಗಿ ಪರೀಕ್ಷೆ ನಡೆಸಬೇಕು ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಹೇಳಿದರು.

ಗುರುವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಉಪನ್ಯಾಸಕರ ಅರ್ಹತಾ ಪರೀೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಒಟ್ಟು 11 ಕೇಂದ್ರಗಳಲ್ಲಿ ಪರೀೆಗಳು ನಡೆಯಲಿದ್ದು, ಒಟ್ಟು 6042 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು.

ಪರೀಕ್ಷೆ ಕೊಠಡಿಗಳಿಗೆ ಸಿಸಿ ಕ್ಯಾಮರಾಗಳನ್ನು ಅಳವಡಿಸುವುದು, ಪರೀಕ್ಷೆ ದಿನದಂದು ಪ್ರತಿ ಕೊಠಡಿಗಳಲ್ಲಿ ಛಾಯಾಗ್ರಾಹಕರನ್ನು ನೇಮಿಸಬೇಕು, ಅಭ್ಯರ್ಥಿಗಳು ಮೊಬೈಲ್​ ಫೋನ್​, ಸ್ಮಾರ್ಟ್​ಫೋನ್​, ಬ್ಯಾಗ್​ ಸೇರಿ ಇತರೇ ವಸ್ತುಗಳನ್ನು ಒಳಗಡೆ ತೆಗೆದುಕೊಂಡು ಹೋಗದಂತೆ ಪರೀಕ್ಷಾ ಕೇಂದ್ರಗಳಲ್ಲಿ ಶುದ್ಧ ಕುಡಿಯುವ ನೀರು, ಗಾಳಿ, ಬೆಳಕು ಸಮರ್ಪಕವಾಗಿರುವಂತೆ ನೋಡಿಕೊಳ್ಳಬೇಕು. ಯಾವುದೇ ಲೋಪವಾಗದಂತೆ ಕಾರ್ಯ ನಿರ್ವಹಿಸಬೇಕು. ರ್ನಿಲಕ್ಷ ತೋರಿದಲ್ಲಿ ಕೊಠಡಿ ಮೇಲ್ವಿಚಾರಕರನ್ನು ಹೊಣೆೆಗಾರರನ್ನಾಗಿಸಲಾಗುವುದು. ಕಡ್ಡಾಯವಾಗಿ ಗುರುತಿನ ಚೀಟಿ ಧರಿಸಿಬೇಕು ಎಂದು ಸೂಚನೆ ನೀಡಿದರು.

ಹೆಚ್ಚುವರಿ ಪೊಲೀಸ್​ ವರಿಷ್ಠಾಧಿಕಾರಿ ಶಂಕರ ಮಾರಿಹಾಳ ಮಾತನಾಡಿ, ಪರೀೆಯನ್ನು ಅತ್ಯಂತ ವ್ಯವಸ್ಥಿತವಾಗಿ ಜರುಗಿಸಲು ಎಲ್ಲ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಬಂದೋಬಸ್ತ್​ ಕಲ್ಪಿಸಲು ಪೊಲೀಸ್​ ಸಿಬ್ಬಂದಿ ನಿಯೋಜಿಸಲಾಗುವುದು ಎಂದು ಹೇಳಿದರು.

ಖಜಾನೆ ಇಲಾಖೆಯ ಉಪ ನಿರ್ದೇಶಕ ಹನಮಂತ ಕಾಲತಿಪ್ಪಿ, ಪ.ಪೂ. ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸಿ.ಕೆ. ಹೊಸಮನಿ, ಪ್ರಾಚಾರ್ಯ ಕೆ. ಎ. ಉಪ್ಪಾರ ಮತ್ತಿತರರಿದ್ದರು.