ಬಳ್ಳಾರಿ : ಜಿಲ್ಲೆಯ ಶೈಕ್ಷಣಿಕ ಮತ್ತು ರಾಜಕೀಯ ಕ್ಷೇತ್ರಕ್ಕೆ ಅಲ್ಲಂ ಕುಟುಂಬ ಮಹತ್ವದ ಕೊಡುಗೆ ನೀಡಿದೆ ಎಂದು ವಿಎಸ್‌ಕೆ ವಿವಿ ಸಹಾಯಕ ಪ್ರಾಧ್ಯಾಪಕ ಡಾ.ಕೆ.ಎಸ್.ಶಿವಪ್ರಕಾಶ್ ಹೇಳಿದರು.
ಇಲ್ಲಿನ ಅಲ್ಲಂ ಸುಮಂಗಳಮ್ಮ ಸ್ಮಾರಕ ಪದವಿ ಕಾಲೇಜಿನಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದೊಂದಿಗೆ ಸೋಮವಾರ ಹಮ್ಮಿಕೊಂಡಿದ್ದ ಶ್ರೀಮತಿ ಅಲ್ಲಂ ಸುಮಂಗಳಮ್ಮ ಮತ್ತು ಅಲ್ಲಂ ಕರಿಬಸಪ್ಪ ದತ್ತಿ ಹಾಗೂ ದಾನಿಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ನಮ್ಮ ಬದುಕಿನ ಪ್ರತಿ ಕ್ಷಣವನ್ನೂ ಸಮಾಜಮುಖಿಯಾಗಿ ಬಳಿಸಿಕೊಂಡಾಗ ಮಾತ್ರ ಮಾನವರಾಗಿ ಹುಟ್ಟಿದ್ದು ಸಾರ್ಥಕವಾಗುತ್ತದೆ ಎಂದರು.
ಎಎಸ್‌ಎಂ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷೆ ಕಾತ್ಯಾಯನಿ ಮರಿದೇವಯ್ಯ ಮಾತನಾಡಿ, ಅಲ್ಲಂ ಸುಮಂಗಳಮ್ಮ ಅವರು ತಮ್ಮ ದೂರದರ್ಶಿತ್ವದ ವ್ಯಕ್ತಿತ್ವದ ಮೂಲಕ ಜಿಲ್ಲೆಯ ಶೈಕ್ಷಣಿಕ ಮತ್ತು ರಾಜಕೀಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಸ್ಮರಿಸಿದರು.