ಜಿಲ್ಲೆ

ಆರ್‌ಎಸ್‌ಎಸ್ ವಿರುದ್ಧ ಆರೋಪ

ಗಾಯತ್ರಿ ಮಾಲಿಪಾಟೀಲ್

ಕವಿತಾಳ: ಆರ್‌ಎಸ್‌ಎಸ್ ಸಂಘಟನೆ ರಾಜ್ಯದಲ್ಲಿ ಜಾತಿ ಎಂಬ ವಿಷ ಬೀಜ ಬಿತ್ತುತ್ತಿದೆ ಎಂದು ಜಿಪಂ ಮಾಜಿ ಸದಸ್ಯ ಕಿರಿಲಿಂಗಪ್ಪ ಅರೋಪಿಸಿದರು. ಪಟ್ಟಣದಲ್ಲಿ ಬುಧವಾರ ಸುದ್ದಿಗೊಷ್ಠಿಯಲ್ಲಿ ಮಾತನಾಡಿದರು. ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್‌ಎಸ್‌ಎಸ್ ಸಂಘಟನೆಯಿಂದ ರಾಜ್ಯದಲ್ಲಿ ಧರ್ಮಗಳ ಮಧ್ಯೆ ಕಲಹ ಉಂಟುಮಾಡುತ್ತಿದೆ. ಆದ್ದರಿಂದ ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧಿಸಬೇಕು ಎಂದು ಹೇಳಿದ್ದರು. ಅವರ ಹೇಳಿಕೆಗೆ ನಾವು ಬೆಂಬಲ ವ್ಯಕ್ತಪಡಿಸುತ್ತೇವೆ ಎಂದರು. ಪ್ರಮುಖರಾದ ಮುದೆಪ್ಪ ದಳಪತಿ ಹೀರಾ, ಸಿದ್ದಣ್ಣ ಸಹುಕಾರ, ಹನುಮಂತ ಹರಕೇರ ಇತರರಿದ್ದರು.