JAVEED KHAN 
ಜಿಲ್ಲೆ

ಅತಿಥಿ ಶಿಕ್ಷಕರ ನೇಮಕಾತಿಯಲ್ಲಿ ಅವ್ಯವಹಾರ -ಆರೋಪ

 ರಾಯಚೂರು ಜಿಲ್ಲೆಯಲ್ಲಿ ಮೌಲಾನಾ ಅಬ್ದುಲ್ ಕಲಾಂ ಆಜಾದ್ ಆಂಗ್ಲ ಮಾಧ್ಯಮ ಸರ್ಕಾರಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿಯಲ್ಲಿ ಅವ್ಯವಹಾರ ನಡೆಯುತ್ತಿದೆಂದು ದಲಿತ ಸೇನೆಯ ರಾಜ್ಯ ಕಾರ್ಯದರ್ಶಿ ಜಾವೀದ ಖಾನ್ ಆರೋಪಿಸಿದರು.

ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಲ್ಪಸಂಖ್ಯಾತರ ಇಲಾಖೆಯಿಂದ ಭ್ರಷ್ಟಾಚಾರ ಮಾಡಿ ಉನ್ನತ ಮಟ್ಟದ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡುವ ಬದಲು ತಮ್ಮ ಮನೋ ಇಚ್ಛೆಯಂತೆ ಕೇವಲ ಹಣದ ಆಮಿಷಕ್ಕೆ ಒಳಗಾಗಿ ಪರೀಕ್ಷೆಯಲ್ಲಿ ಕಡಿಮೆ ಅಂಕಪಡೆದವರನ್ನು ನೇಮಕಾತಿ ಮಾಡಿಕೊಂಡಿದ್ದಾರೆಂದು ಆರೋಪಿಸಿದರು.

ಜಿಲ್ಲೆಯಾದ್ಯಂತ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳು ಇಲ್ಲದ ಕಾರಣ ಸಂಪೂರ್ಣ ಹದಗೆಟ್ಟಿದೆ ಜಿಲ್ಲೆಯಲ್ಲಿ ವಿದ್ಯಾರ್ಥಿಗಳಿಗೆ ಸರಿಯಾಗಿ ಶಿಕ್ಷಣ ಕೊಡುವಲ್ಲಿ ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತ ಸಂಪೂರ್ಣವಾಗಿ ವಿಫಲವಾಗಿದೆ ಎಂದರು.

ಈ ಸಂದರ್ಭದಲ್ಲಿ ಬಾಬುರಾವ್, ಕೃಷ್ಣ , ರಾಜಾಸಾಬ್ ಇದ್ದರು.