ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಜೈಲಿಗೆ ಭೇಟಿ ನೀಡಿ ಸವಲತ್ತು ಪರಿಶೀಲಿಸಬೇಕು. ಜೈಲು ಕೈಪಿಡಿಯಂತೆ ಸವಲತ್ತು ನೀಡಲಾಗಿದೆಯೇ ಎಂಬುದನ್ನು ಪರಿಶೀಲಿಸಿ, ಅ.18 ರೊಳಗೆ ಭೇಟಿ ನೀಡಿ ವರದಿ ನೀಡುವಂತೆ 57ನೇ ಸಿಸಿಎಚ್ ಕೋರ್ಟ್ ಸೂಚನೆ ಹೊರಡಿಸಿದೆ.
ಬೆಂಗಳೂರು; ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ದರ್ಶನ್‌ಗೆ ಜೈಲಿನಲ್ಲಿ ಹಾಸಿಗೆ, ದಿಂಬು ಕೊಡದ ಹಿನ್ನಲೆ ಖುದ್ದು ನ್ಯಾಯಾಧೀಶರು ಜೈಲಿಗೆ ಹೋಗಿ ಪರಿಶೀಲಿಸುವಂತೆ ದರ್ಶನ್ ಪರ ವಕೀಲ ಸುನೀಲ್ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ಸೀಕಾರ ಮಾಡಿದೆ.
ದರ್ಶನ್‌ಗೆ ಜೈಲಿನಲ್ಲಿ ಕನಿಷ್ಠ ಸೌಲಭ್ಯವನ್ನೂ ಸಹ ನೀಡಿಲ್ಲ ಎಂದು ದರ್ಶನ್ ಪರ ವಕೀಲರು ವಾದ ಮಂಡಿಸಿದರು. ಜೈಲಿನಲ್ಲಿ ದೈಹಿಕ ಹಿಂಸೆ ನೀಡಲಾಗುತ್ತಿದೆ ಹಾಗಾಗಿ ನ್ಯಾಯಾಧೀಶರೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವಂತೆ ದರ್ಶನ್ ಮನವಿ ಮಾಡಿಕೊಂಡಿದ್ದರು. ಹಾಗಾಗಿ ಇದನ್ನು ಗಂಭೀರವಾಗಿ ಮನ್ನಣೆಗೆ ತೆಗೆದುಕೊಂಡ ಕೋರ್ಟ್ ಇದೀಗ ಆದೇಶ ಹೊರಡಿಸಿದೆ. ಈ ಅರ್ಜಿಯ ಬಗ್ಗೆ ಇಂದು ವಿಚಾರಣೆ ನಡೆಸಿದ 57ನೇ ಸಿಸಿಎಚ್ ಕೋರ್ಟ್ ಜಡ್ಜ್ ಈರಪ್ಪಣ್ಣ ಪವಡಿ ನಾಯ್ಕ್ ಈ ಆದೇಶ ನೀಡಿದ್ದಾರೆ.
(ಏಜೆನ್ಸೀಸ್)
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ವಿಶೇಷ ಸವಲತ್ತು ಸಿಗದಂತೆ ನೋಡಿಕೊಳ್ಳಲಾಗುತ್ತಿದೆ ಎಂದು ಹೆಚ್ಚುವರಿ ದಿಂಬು ಹಾಗೂ ಬೇಡ್ಶೀಟ್ಗಾಗಿ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ದರ್ಶನ್ ಅರ್ಜಿ ಸಲ್ಲಿಸಿದ್ದರು. ಆಗ ಅಲ್ಲಿನ ಕಠಿಣ ನಿಯಮಗಳಿಂದ ನರಕಯಾತನೆ ಉಂಟಾಗುತ್ತಿರುವುದರಿಂದ ದರ್ಶನ್ ನನಗೆ ಮಾತ್ರ ಪಾಯಿಸನ್ ನೀಡಲಿ. ಕೋರ್ಟ್ನಿಂದಲೇ ಈ ಆದೇಶ ನೀಡಬೇಕು. ನಾನು ಬಿಸಿಲು ನೋಡಿ 30 ದಿನಗಳಾಗಿವೆ. ಕೈ ಎಲ್ಲಾ ಫಂಗಸ್ ಬಂದಿದೆ. ಎಂದು ಜಡ್ಜ್ ಮುಂದೆ ಹೇಳಿದ್ದಾರೆ ಎನ್ನಲಾಗಿತ್ತು. ಆಗ ಜಡ್ಜ್ ‘ನೀವು ಹಾಗೆಲ್ಲಾ ಹೇಳುವಂತಿಲ್ಲ’ ಎಂದಿದ್ದರು.