ಬೆಂಗಳೂರಿನಲ್ಲಿ ನಡೆಯಲಿರುವ ಮುಷ್ಕರದಲ್ಲಿ ನೌಕರರು ಪಾಲ್ಗೊಳ್ಳಲು ಅವಕಾಶ ಮಾಡಿಕೊಡುವಂತೆ ತಾಲೂಕು ಪಂಚಾಯಿತಿ ಅಧಿಕಾರಿಗೆ ಗುಂಡ್ಲುಪೇಟೆ ಗ್ರಾಮ ಪಂಚಾಯಿತಿ ನೌಕರರ ಸಂಘದ ಪದಾಧಿಕಾರಿಗಳು ಮನವಿ ಮಾಡಿದರು. ಬಿ.ಎಂ.ರಾಜಪ್ಪ, ರಿತೀಶ್, ಸಿದ್ದರಾಜು, ಮಲ್ಲು ಇದ್ದರು. ಚಾಮರಾಜನಗರ, ಗುಂಡ್ಲುಪೇಟೆ, ಸಿಎಂ ಮನೆ, ಮುತ್ತಿಗೆ,  
ಜಿಲ್ಲೆ

ಸಿಎಂ ಮನೆ ಮುತ್ತಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಿ

ಗುಂಡ್ಲುಪೇಟೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಗುರುವಾರದಿಂದ ಬೆಂಗಳೂರಿನಲ್ಲಿ ನಡೆಯಲಿರುವ ಮುಷ್ಕರದಲ್ಲಿ ಪಾಲ್ಗೊಳ್ಳಲು ಅವಕಾಶ ಮಾಡಿಕೊಡುವಂತೆ ಗ್ರಾಮ ಪಂಚಾಯಿತಿ ನೌಕರರ ಸಂಘದ ಪದಾಧಿಕಾರಿಗಳು ತಾಲೂಕು ಪಂಚಾಯಿತಿಗೆ ಮನವಿ ಮಾಡಿದ್ದಾರೆ.

ಗ್ರಾಮ ಪಂಚಾಯಿತಿ ನೌಕರರ ಸಂಘದ ತಾಲೂಕು ಹಾಗೂ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಬುಧವಾರ ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಅಧಿಕಾರಿಗಳನ್ನು ಭೇಟಿ ಮಾಡಿದರು.

ಸಂಘದ ಜಿಲ್ಲಾ ಉಪಾಧ್ಯಕ್ಷ ಎಂ.ಮಲ್ಲು ಮಾತನಾಡಿ, ಪ್ರಮುಖ ಬೇಡಿಕೆಗಳಾದ 31 ಸಾವಿರ ರೂ.ಕನಿಷ್ಠ ವೇತನ, ಪಿಂಚಣಿ ಹಾಗೂ ಸೇವಾ ಹಿರಿತನ ಭತ್ಯೆ ಹೆಚ್ಚಳ, ಪ್ರತಿ ಪಂಚಾಯಿತಿಗೂ ಎಸ್‌ಡಿಎ ನೇಮಕ, ಗ್ರಾಮ ಪಂಚಾಯಿತಿಯಲ್ಲಿ ಅನ್ಯ ಇಲಾಖೆಯ ನೌಕರರನ್ನು ಕೈಬಿಡುವುದು ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕುವ ಕಾರ್ಯಕ್ರಮ ಹಾಕಿಕೊಳ್ಳಲಾಗಿದೆ. ಆದ್ದರಿಂದ ಎಲ್ಲ ಗ್ರಾಮ ಪಂಚಾಯಿತಿಗಳ ನೌಕರರೂ ಪಾಲ್ಗೊಳ್ಳುತ್ತಿದ್ದೇವೆ. ಆದ್ದರಿಂದ ಅಧಿಕಾರಿಗಳು ಅವಕಾಶ ಮಾಡಿಕೊಡಬೇಕು ಎಂದು ತಾಲೂಕು ಪಂಚಾಯಿತಿ ಯೋಜನಾಧಿಕಾರಿ ರಿತೀಶ್ ಅವರಿಗೆ ಮನವಿ ಮಾಡಿದರು.

ಸಂಘದ ಜಿಲ್ಲಾಧ್ಯಕ್ಷ ಸಿದ್ದರಾಜು ಬರಗಿ, ತಾಲೂಕು ಅಧ್ಯಕ್ಷ ಬಿ.ಎಂ.ರಾಜಪ್ಪ, ಪ್ರಧಾನ ಕಾರ್ಯದರ್ಶಿ ಅಣ್ಣೂರು ಸಿದ್ದರಾಜು ಇದ್ದರು.