ಜಿಲ್ಲೆ

ವಿಮಾ ಮೊತ್ತ ಪಾವತಿಸಲು ಅವಕಾಶ

ಎಂ.ರವಿ

ಅರಸೀಕೆರೆ: ಮುಂಗಾರು ಹಂಗಾಮಿನಲ್ಲಿ ಬಿತ್ತನೆಯಾಗಿರುವ ಬೆಳೆಗಳಿಗೆ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ವಿಮಾ ಮೊತ್ತ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ.

ಹೆಸರು, ಉದ್ದು, ಅಲಸಂದೆ, ಎಳ್ಳು ಹಾಗೂ ಆಲೂಗಡ್ಡೆ ಬಿತ್ತನೆ ಮಾಡಿರುವ ರೈತರು ಇದರ ಪ್ರಯೋಜನ ಪಡೆಯಬಹುದಾಗಿದೆ. ವಿಮಾ ಮೊತ್ತ ಪಾವತಿಸಲು ಬಯಸುವ ಆಸಕ್ತರು ಸಮೀಪದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ ಎಂದು ಕೃಷಿ ಇಲಾಖೆಯ ತಾಲೂಕು ಸಹಾಯಕ ಕೃಷಿ ನಿರ್ದೇಶಕ ಎ.ಪಿ.ಶಿವಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.