ಜಿಲ್ಲೆ

ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿಗೆ ವಿರೋಧ; ಕಾಂಗ್ರೆಸ್‌ನಿ೦ದ ಬೃಹತ್ ಪ್ರತಿಭಟನೆ

ವಿಜಯವಾಣಿ ಸುದ್ದಿಜಾಲ ಧಾರವಾಡ
ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಘಟಕದಿಂದ ಸೋಮವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.
ನಗರದ ಕಲಾಭವನ ಮೈದಾನದಿಂದ ಜ್ಯುಬಿಲಿ ವೃತ್ತ, ಕೋರ್ಟ್ ವೃತ್ತ ಮಾರ್ಗವಾಗಿ ಜಿಲ್ಲಾಽಕಾರಿ ಕಚೇರಿವರೆಗೆ ಪ್ರತಿಭಟನಾ ರ‍್ಯಾಲಿ ನಡೆಸಲಾಯಿತು.
ಈ ವೇಳೆ ಕಾರ್ಮಿಕ ಸಚಿವ ಸಂತೋಷ ಲಾಡ್ ಮಾತನಾಡಿ, ಬಿಜೆಪಿ ಸರ್ಕಾರವಿದ್ದಾಗಲೇ ಮುಡಾ ಸೈಟ್‌ಗಳನ್ನು ನೀಡಿ ಇದೀಗ ಕಾನೂನುಬಾಹಿರ ಎನ್ನುತ್ತಿದ್ದಾರೆ. ರಾಜಭವನ ದುರುಪಯೋಗ ಮಾಡಿಕೊಳ್ಳುತ್ತಿರುವ ಬಿಜೆಪಿ, ರಾಜ್ಯಪಾಲರನ್ನು ರಾಜಕೀಯ ಟೂಲ್‌ಕಿಟ್‌ನಂತೆ ಬಳಸಿಕೊಳ್ಳುತ್ತಿದೆ.
ಸಿದ್ದರಾಮಯ್ಯ ವಿರುದ್ಧ 40 ವರ್ಷಗಳಲ್ಲಿ ಒಂದೂ ಭ್ರಷ್ಟಾಚಾರ ಆರೋಪವಿಲ್ಲ. ಯಾವ ಆಧಾರದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು? ಎಂದು ಪ್ರಶ್ನಿಸಿದರು.
ಶಾಸಕ ಎನ್.ಎಚ್. ಕೋನರಡ್ಡಿ ಮಾತನಾಡಿ, ರಾಜ್ಯಪಾಲರು ರಾಜಭವನವನ್ನು ದುರುಪಯೋಗ ಮಾಡಿಕೊಳ್ಳುವುದರಿಂದ ಜನರಿಗೆ ತಪ್ಪು ಸಂದೇಶ ಹೋಗುತ್ತದೆ ಎಂದರು.
ಶಾಸಕ ಪ್ರಸಾದ ಅಬ್ಬಯ್ಯ, ಮಾಜಿ ಶಾಸಕಿ ಕುಸುಮಾವತಿ ಶಿವಳ್ಳಿ, ಅನಿಲಕುಮಾರ ಪಾಟೀಲ, ಅಲ್ತಾಫ ಹಳ್ಳೂರ, ನಾಗರಾಜ ಗೌರಿ, ಬಸವರಾಜ ಗುರಿಕಾರ, ಶಿವಶಂಕರ ಹಂಪಣ್ಣವರ, ದೇವಕಿ ಯೋಗಾನಂದ, ಶರಣಪ್ಪ ಕೊಟಗಿ, ಎಸ್.ಆರ್. ಪಾಟೀಲ, ಬಾಬಾಜಾನ ಮುಧೋಳ, ಮೋಹನ ಲಿಂಬಿಕಾಯಿ, ರಾಜು ಕಮತಿ, ಕವಿತಾ ಕಬ್ಬೇರ, ನಿರಂಜನ ಹಿರೇಮಠ, ಶಂಭು ಸಾಲಮನಿ ಸೇರಿ ಸಾವಿರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.